ಇಂದು ಸಂಜೆ ಸಭಾ ಕಾರ್ಯಕ್ರಮ
ಇಂದು ಮತ್ತು ನಾಳೆ ನೇಮೋತ್ಸವ
ಶ್ರೀ ಉಳ್ಳಾಕುಲು ಉಳ್ಳಾಲ್ತಿ ಮಹಿಷಂತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನ ಅಳ್ಪೆ-ಚಿಂಗಾಣಿಗುಡ್ಡೆ ಪಂಜ ಇದರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಎ. 23 ರಂದು ಸಂಜೆ ಆರಂಭ ಗೊಂಡಿದ್ದು ಎ.25 ತನಕ ಜರಗಲಿರುವುದು.
ಎ. 23.ರಂದು ಸಂಜೆ ಶ್ರೀಕ್ಷೇತ್ರಕ್ಕೆ ತಂತ್ರಿಗಳ ಆಗಮನ,ದೇವತಾ ಪ್ರಾರ್ಥನೆ ಆಚಾರ್ಯ ವರಣ ,ಸ್ವಸ್ತಿ ಪುಣ್ಯಾಹವಾಚನ , ಸ್ಥಳಶುದ್ಧಿ ,ಪ್ರಾಸಾದ ಶುದ್ಧಿ, ಮಹಾಸುದರ್ಶನ ಹೋಮ, ಆವಾಹನೆ , ಉಚ್ಛಾಟನೆ, ರಾಕ್ಷೋಘ್ನ ಹೋಮ , ವಾಸ್ತು ಹೋಮ, ವಾಸ್ತು ಪೂಜಾ ಬಲಿ, ನೂತನ ಬಿಂಬಗಳ ಜಲಾಧಿವಾಸ, ಪ್ರಕಾರ ಬಲಿ, ಪ್ರಸಾದ ವಿತರಣೆ , ಅನ್ನಸಂತರ್ಪಣೆ ಜರುಗಿತು.
ಎ. 24ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಬ್ರಹ್ಮಕಲಶ ಪೂಜೆ, ಪೂ.ಗಂಟೆ 9:32 ನಂತರ ಮಿಥುನ ಲಗ್ನದ ಶುಭಮುಹೂರ್ತದಲ್ಲಿ ಶ್ರೀ ಉಳ್ಳಾಕುಲು ಉಳ್ಳಾಲ್ತಿ, ಮಹಿಷಂತಾಯ,ರುದ್ರಚಾಮುಂಡಿ ಪಂಜುರ್ಲಿ ಹಾಗೂ ಪರಿವಾರ ದೈವಗಳ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ತಂಬಿಲ ಸೇವೆ, ಮಂಗಳಾರತಿ , ನೈಮಿತ್ತಿಕ ನಿಯಮಗಳ ಪ್ರಾರ್ಥನೆ, ಪ್ರಸಾದ ವಿತರಣೆ , ಅನ್ನಸಂತರ್ಪಣೆ ನಡೆಯಿತು. ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವದಾಸ ರೈ ಕೆಬ್ಲಾಡಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಭವಾನಿ ಶಂಕರ ಪಾಲೋಳಿ, ಆಡಳಿತ ಮಂಡಳಿ ಗೌರವಧ್ಯಕ್ಷ ಜತ್ತಪ್ಪ ಗೌಡ ಕೋಡಿ,ಅಧ್ಯಕ್ಷ ಭರತ್ ರಾಮತೋಟ, ಆಡಳಿತ ಮಂಡಳಿ ಪದಾಧಿಕಾರಿಗಳು, ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ವಿವಿಧ ಸಮಿತಿಗಳ ಸಂಚಾಲಕರು, ಸದಸ್ಯರು, ಭಕ್ತಾಧಿಗಳು ಪಾಲ್ಗೊಂಡಿದ್ದರು .
ಸಂಜೆ ಗಂಟೆ 4 ರಿಂದ
ಸಭಾ ಕಾರ್ಯಕ್ರಮ ಜರುಗಲಿದೆ.
ಶ್ರೀಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಸಭಾಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ವಹಿಸಲಿದ್ದಾರೆ. .ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರ ಮಾನ್ಯ ಉಸ್ತುವಾರಿ ಮತ್ತು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ, ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿ ಬೈಲುಗುತ್ತು, ಉಪಸ್ಥಿತರಿರುವರು. ಅದೇ ಸಂಜೆ ಗಂಟೆ 6.45ರಿಂದ ಬಂಡಾರ ತೆಗೆಯುವುದು, ರಾತ್ರಿ ಗಂಟೆ 9 ಕ್ಕೆ ಶ್ರೀ ದೈವಂಕುಲು ಮಹಿಷಂತಾಯ, ಮಣಿಪಾನ, ಪಂಜುರ್ಲಿ ಮತ್ತು ಉಳ್ಳಾಲ್ತಿ ಅಮ್ಮನವರ ನೇಮೋತ್ಸವ ಜರುಗಲಿದೆ. ಎ. 25 ರಂದು ಬೆಳಿಗ್ಗೆ ಗಂಟೆ 9 ಕ್ಕೆ ಶ್ರೀ ಉಳ್ಳಾಕುಲು ಮತ್ತು ವರ್ಣಾರ ಪಂಜುರ್ಲಿ ಮತ್ತು ಗುಳಿಗ ದೈವಗಳ ನೇಮೋತ್ಸವ, ರಾತ್ರಿ ಗಂಟೆ 9ರಿಂದ ಶ್ರೀ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ನೇಮೋತ್ಸವ ಜರುಗಲಿರುವುದು.