75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಆಚರಿಸು ಬಗ್ಗೆ ” ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್” ಅಂಗವಾಗಿ ವಿಶೇಷ ಗ್ರಾಮ ಸಭೆ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡು ಮಾಹಿತಿ ಕಾರ್ಯಕ್ರಮವು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಎ.24ರಂದು ನಡೆಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಯಂ. ಬಾಬು ಕದಿಕಡ್ಕ ಅವರು ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿವಸದ ಕಾರ್ಯಕ್ರಮದ ಯೂಟ್ಯೂಬ್ ನೇರಪ್ರಸಾರವನ್ನು ವೀಕ್ಷಣೆ ಮಾಡಲಾಯಿತು. ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡು ನೋಂದಣಿ ಬಗ್ಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ತಾಂತ್ರಿಕ ಕೃಷಿ ಅಧಿಕಾರಿ ಮೋಹನ ನಂಗಾರು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ., ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಸದಸ್ಯರುಗಳಾದ ಸಂದೀಪ್ ಪಿ.ಆರ್. ಕದಿಕಡ್ಕ, ಶ್ರೀಮತಿ ತಿರುಮಲೇಶ್ವರಿ ಮರಸಂಕ, ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಶ್ರೀಮತಿ ಸಂಧ್ಯಾವಾಗ್ಲೆ, ವಿಜಯ ಅಡ್ಕಾರು, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ, ಮುಜೀಬ್ ಪೈಚಾರು, ಈಶ್ವರ ನಾಯ್ಕ ಕುಕ್ಕಂದೂರು, ಶ್ರೀಮತಿ ಅಂಬಿಕಾ ಕುಕ್ಕಂದೂರು, ಶ್ರೀಮತಿ ದೀಪಾ ಅಜಕಳಮೂಲೆ, ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ. ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.