ಶ್ರೀ ಶಾರದಾಂಬ ಭಜನಾ ಮಂಡಳಿ ಪಂಜ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಪಂಜ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಸುಳ್ಯ ತಾಲೂಕು ಇವರ ವತಿಯಿಂದ 13ನೇ ವರ್ಷದ ಭಜನಾ ತರಬೇತಿ ಶಿಬಿರ ಎ.25 ರಂದು ಪಂಜ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಉದ್ಘಾಟನೆ ಗೊಂಡು ಎ.29 ರಂದು ಸಂಜೆ ಗಂಟೆ 3ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ.
ಸಮಾರೋಪ ಸಮಾರಂಭದಲ್ಲಿ ಶ್ರೀಕ್ಷೇತ್ರ ಒಡಿಯೂರು ಗುರುದೇವದತ್ತ ಸಂಸ್ಥಾನಂ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಭಜನಾ ತರಬೇತಿ ಸಂಚಾಲಕ ಕುಸುಮಾಧರ ಕೆಮ್ಮೂರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ
ರಾಜ್ಯ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಮತ್ತು ಉಸ್ತುವಾರಿ ಸಚಿವ ಎಸ್ ಅಂಗಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ರಾಜ್ಯ ಕಾರ್ಯದರ್ಶಿ ಜಯರಾಮ ನೆಲ್ಲಿತ್ತಾಯ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಲಿಗೋಧರ ಆಚಾರ್ಯ , ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಜಾಕೆ ,
ಶ್ರೀಮತಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಪಂಜ ವಲಯ ಮೇಲ್ವಿಚಾರಕಿ
ಉಷಾ ಕಲ್ಯಾಣಿ ಕೆ ಉಪಸ್ಥಿತರಿರುವರು.