ಶ್ರೀ ವಿಶ್ವಕರ್ಮ ಭಜನಾ ಮಂಡಳಿ ನಿಡ್ಮಾರು ಇದರ ವತಿಯಿಂದ ಭಜನಾ ಮಂಡಳಿ ಸದಸ್ಯರು ಮತ್ತು ಸಮಾಜ ಬಾಂದವರಿಂದ ಏ. 22ರಂದು ಕಟಪಾಡಿ ಆನೆಗುಂದಿ ಮಹಾಸಂಸ್ಥಾನ ಶ್ರೀ ಸರಸ್ವತೀ ಪೀಠ ಪ್ರತಿಷ್ಠಾನದ ಪೀಠಾಧೀಶ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರ ಗುರು ಪಾದಪೂಜೆಯನ್ನು ಮಾಡಿದರು. ಶ್ರೀ ವಿಶ್ವಕರ್ಮ ಭಜನಾ ಮಂಡಳಿ ನಿಡ್ಮಾರು ಇದರ 20ನೇ ವರ್ಷದ ವಾರ್ಷಿಕೋತ್ಸವದ ಸವಿನೆನಪಿಗಾಗಿ ಗುರುಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು.