ಸುಳ್ಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯವರಿಗೆ ಬೀಳ್ಕೊಡುಗೆ ಸಮಾರಂಭವು ಎ.27 ರಂದು ಯೋಜನೆಯ ಕಛೇರಿ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ ರಾಮಚಂದ್ರ ರವರು ವಹಿಸಿದ್ದರು. ವೇದಿಕೆಯಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ,ಜನಜಾಗೃತಿ ವೇದಿಕೆಯ ಅಧ್ಯಕ್ಷ ವಿಶ್ವನಾಥ ರೈ ಕಳಂಜ, ನಿ.ಪೂ.ಅಧ್ಯಕ್ಷೆ ವಿಮಲಾ ರಂಗಯ್ಯ,ವರ್ಗಾವಣೆಗೊಂಡ ಯೋಜನಾಧಿಕಾರಿ ಚೆನ್ನಕೇಶವ, ನೂತನ ಯೋಜನಾಧಿಕಾರಿ ನಾಗೇಶ್ ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ ಸ್ವಾಗತಿಸಿದರು. ಪ್ರವೀಣ್ ಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಮೇಲ್ವಿಚಾರಕಿ ಉಷಾ ಕಲ್ಯಾಣಿ ವಂದಿಸಿದರು. ಆಂತರಿಕ ಲೆಕ್ಕ ಪರಿಶೋಧಕ ಉಮೇಶ್ ಬಿ ಕಾರ್ಯಕ್ರಮ ನಿರೂಪಿಸಿದರು.ವಲಯ ಒಕ್ಕೂಟದ ಅಧ್ಯಕ್ಷರು,
ಭಜನಾ ಪರಿಷತ್ ಅಧ್ಯಕ್ಷರು ಮತ್ತು ಸದಸ್ಯರು, ವಲಯದ ಮೇಲ್ವಿಚಾರಕರು ಉಪಸ್ಥಿತರಿದ್ದರು.