ಸಚಿವ ಎಸ್.ಅಂಗಾರರಿಂದ ಮಹಿಳಾ ಮಂಡಲಗಳ ಒಕ್ಕೂಟದ ನೂತನ ಕಟ್ಟಡ ಉದ್ಘಾಟನೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

      

2015-16 ನೇ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಸುಳ್ಯದಲ್ಲಿರುವ ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟಕ್ಕೆ ನೀಡಿದ ಅನುದಾನದಿಂದ ರಚನೆಗೊಂಡ ನೂತನ ಕಟ್ಟಡದ ಉದ್ಘಾಟನೆಯನ್ನು ಎ. 22 ರಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಎಸ್. ಅಂಗಾರರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಇಲಾಖೆಗಳಿಂದ ಮಹಿಳೆಯರಿಗಾಗಿ ಸ್ವೋದ್ಯೋಗದಲ್ಲಿ ತೊಡಗಿಸಿಕೊಳ್ಳಲು ಇರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಶುಭಹಾರೈಸಿದರು. ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ತ್ರಿವೇಣಿ ದಾಮ್ಲೆ ಅಧ್ಯಕ್ಷತೆ ವಹಿಸಿದ್ದರು. ನಗರ ಪಂಚಾಯತ್ ಸದಸ್ಯೆ ಕಿಶೋರಿ ಶೇಟ್, ಮಹಿಳಾ ಮಂಡಲದ ಪೂರ್ವಾಧ್ಯಕ್ಷೆ ಶ್ರೀಮತಿ ಪ್ರಪುಲ್ಲ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಸಚಿವರನ್ನು ಅಭಿನಂದಿಸಲಾಯಿತು. ಮಹಿಳಾ ಮಂಡಲಗಳ ಒಕ್ಕೂಟದ ಉಪಾಧ್ಯಕ್ಷೆ ಮಧುಮತಿ ಬೊಳ್ಳೂರು ಪ್ರಾಸ್ತಾವಿಕ ಮಾತನಾಡಿದರು. ರಮ್ಯಾ ಪ್ರಾರ್ಥಿಸಿದರು, ಹೇಮಾವತಿ ಸ್ವಾಗತಿಸಿದರು, ಲಲಿತಾ ವಂದಿಸಿದರು, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕಾಂತಿ ಬಿ.ಎಸ್. ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಒಕ್ಕೂಟದ ಪದಾಧಿಕಾರಿಗಳು. ಪೂರ್ವಾಧ್ಯಕ್ಷರು ಹಾಗೂ ತಾಲೂಕಿನ ಮಹಿಳಾ ಮಂಡಳಿಗಳ ಸದಸ್ಯರು ಭಾಗವಹಿಸಿದ್ದರು.

 

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.