ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ. 26 ರಂದು ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಏ.26 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯ ವರಣ, ಸ್ವಸ್ತಿ ಪುಣ್ಯಾಹವಾಚನ, ಮಹಾ ಗಣಪತಿ ಹೋಮ, ಪಂಚವಿಂಶತಿ, ಕಲಶಪೂಜೆ, ಮಧ್ಯಾಹ್ನ ಶ್ರೀದೇವರಿಗೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದು, ಸಂಜೆ ದೇವತಾ ಪ್ರಾರ್ಥನೆ ಮತ್ತು ಸೇವಾ ರಂಗಪೂಜೆ , ಬಳಿಕ ಮಹಾಪೂಜೆ ಅನ್ನಸಂತರ್ಪಣೆ ನಡೆಯಿತು.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ಶ್ರೀ ಮಹಿಷಮರ್ದಿನಿ ಯಕ್ಷಗಾನ ಅಧ್ಯಯನ ಕೇಂದ್ರ ಕೇರ್ಪಡದ ವಿದ್ಯಾರ್ಥಿಗಳಿಂದ ಶ್ರೀ ಯಕ್ಷಮಣಿ ಗಿರೀಶ್ ಗಡಿಕಲ್ಲುರವರ ನಿರ್ದೇಶನದಲ್ಲಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಬಯಲಾಟ, ಬಳಿಕ ಶ್ರೀ ಮಹಿಷಮರ್ದಿನಿ ಕಲಾಸಂಘ ಕೇರ್ಪಡ ಇವರಿಂದ ಹಿರಣ್ಯಾಕ್ಷ ವಧೆ ಯಕ್ಷಗಾನ ಬಯಲಾಟವು ಎಡಮಂಗಲ ಲಕ್ಷ್ಮಣ ಆಚಾರ್ಯರ ನಿರ್ದೇಶನದಲ್ಲಿ ನಡೆಯಿತು.
ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಗಂಧ ಪ್ರಸಾದ ಸ್ವೀಕರಿಸಿದರು.