ಮಡಪ್ಪಾಡಿ ಗ್ರಾಮ ಪಂಚಾಯತ್ ನ 2021-22ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯು ಇಂದು ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ನೋಡೆಲ್ ಅಧಿಕಾರಿಯಾಗಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ. ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ನಾಗವೇಣಿ ವರದಿ ಮಂಡಿಸಿದರು.
ವೇದಿಕೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಶ್ರೀಮತಿ ಉಷಾ ಜಯರಾಮ್, ಸದಸ್ಯರಾದ ಜಯರಾಮ ಹಾಡಿಕಲ್ಲು, ಸುಜಾತ ಹಾಡಿಕಲ್ಲು, ಶರ್ಮಿಳಾ ಕಜೆ ಉಪಸ್ಥಿತರಿದ್ದರು. ಇಲಾಖೆಯ ಅಧಿಕಾರಿ ಗಳು ಮಾಹಿತಿ ನೀಡಿದರು. ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಸಿಬ್ಬಂದಿ ಸುದೀನ್ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಸಿಬ್ಬಂದಿ ಗಳಾದ ತನುರಾಜ್, ಪುಷ್ಪಲತಾ, ಗ್ರಂಥಪಾಲಕಿ ನವ್ಯ ಹಾಗೂ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತ ಪುಟ್ಟಣ್ಣ ಸಹಕರಿಸಿದರು.