*
*ಗ್ರಾಮದ ಎಲ್ಲಾ ಜನರ ಪಾಲ್ಗೊಳ್ಳುವಿಕೆಯಿಂದ ಉತ್ತಮ ಕಾರ್ಯಕ್ರಮ – ಎಸ್.ಎನ್.ಮನ್ಮಥ*
ಐವರ್ನಾಡು ಗ್ರಾಮದ ದಿ.ಎನ್.ಎಂ.ಬಾಲಕೃಷ್ಣ ಗೌಡರ ಪುತ್ಥಳಿ ರಚನಾ ಸಮಿತಿ ವತಿಯಿಂದ ಐವರ್ನಾಡಿನ ಅಣ್ಣ ಎನ್.ಎಂ.ಬಾಲಕೃಷ್ಣ ಗೌಡರ ಪುತ್ಥಳಿಯ ಲೋಕಾರ್ಪಣಾ ಕಾರ್ಯಕ್ರಮವು ಮೇ.08 ರಂದು ನಡೆಯಲಿದ್ದು ಆಮಂತ್ರಣ ಪತ್ರ ಬಿಡುಗಡೆಯು ಎ.28 ರಂದು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.
ಸಮಿತಿ ಅಧ್ಯಕ್ಷ ಎಸ್.ಎನ್ ಮನ್ಮಥರವರು ಆಮಂತ್ರಣ ಬಿಡುಗಡೆಗೊಳಿಸಿದರು.
ಬಳಿಕ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು ಮೇ.08 ರಂದು ದಿ.ಎನ್.ಎಂ.ಬಾಲಕೃಷ್ಣ ಗೌಡರ ಪುತ್ಥಳಿಯ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ.
ಈಗಾಗಲೇ ಪುತ್ಥಳಿ ರಚನಾ ಸ್ಥಳದಲ್ಲಿ ಎಲ್ಲಾ ಕೆಲಸಗಳು ಭರದಿಂದ ನಡೆಯುತ್ತಿದೆ.
ಸಮಿತಿಯ ಮುಖಾಂತರ ಎಲ್ಲಾ ಮನೆಗಳಿಗೆ ಕಾರ್ಯಕ್ರಮದ ಆಮಂತ್ರಣ ತಲುಪಿಸುವ ವ್ಯವಸ್ಥೆ ಮಾಡಲಾಗುವುದು.
ಇಡೀ ಗ್ರಾಮದ ಎಲ್ಲಾ ಮನೆಯಿಂದ ಜನರು ಕಾರ್ಯಕ್ರಮದಲ್ಲಿ ಬಂದು ಭಾಗವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ, ನಾಮಫಲಕ ಅನಾವರಣ ಹಾಗೂ ಕಾರ್ಯಕ್ರಮದ ಇಡೀ ವಿವರವನ್ನು ಸಭೆಯ ಮುಂದಿಟ್ಟರು.
ಸಮಿತಿಯ ಕೋಶಾಧಿಕಾರಿ ರವಿಪ್ರಸಾದ್ ಸಿ.ಕೆಯವರು ಪುತ್ಥಳಿ ಲೋಕಾರ್ಪಣಾ ದಿನದಂದು ಯಶಸ್ವಿಯಾಗಿ ಕಾರ್ಯಕ್ರಮ ನಡೆಯಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಸಮಿತಿಯ ವಿವರ ಮತ್ತು ಜವಾಬ್ದಾರಿಗಳ ಬಗ್ಗೆ ವಿವರ ನೀಡಿದರು.
ಪ್ರಧಾನ ಕಾರ್ಯದರ್ಶಿ ದಿನೇಶ್ ಮಡ್ತಿಲರವರು ಸ್ಮರಣ ಸಂಚಿಕೆಯ ಬಗ್ಗೆ ಮಾಹಿತಿ ನೀಡಿ ಈಗಾಗಲೇ ಸ್ಮರಣ ಸಂಚಿಕೆಯ ಕೆಲಸಗಳು ಅಂತಿಮ ಹಂತದಲ್ಲಿದ್ದು ಲೇಖನಗಳು ಹಾಗೂ ಫೊಟೊಗಳನ್ನು ಕೂಡಲೇ ಕೊಡುವಂತೆ ವಿನಂತಿಸಿಕೊಂಡರು.
ಸಂಚಿಕೆಯಲ್ಲಿ ಪ್ರಕಟವಾಗುವ ಲೇಖನಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಸಮಿತಿಯ ಉಪಾಧ್ಯಕ್ಷರುಗಳಾದ ಬಾಲಕೃಷ್ಣ ಕೀಲಾಡಿ, ಶ್ರೀಮತಿ ಸುಜಾತ ಪವಿತ್ರಮಜಲು, ದಾಮೋದರ ಗೌಡ ಜಬಳೆ, ಡಾ.ಬಾಲಸುಬ್ರಹ್ಮಣ್ಯ ಭಟ್ ಪಾಲೆಪ್ಪಾಡಿ,ಪದ್ಮನಾಭ ಗೌಡ ನೂಜಾಲು ಉಪಸ್ಥಿತರಿದ್ದರು.
ರವಿಪ್ರಸಾದ್ ಸಿ.ಕೆ.ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.
ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.