Breaking News

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ನಿಂಗಯ್ಯ ಮುಂದುವರಿಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ವರ್ಗಾವಣೆಯಾದ ವಾರದೊಳಗೆ ಆದೇಶ ರದ್ದು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ನಿಂಗಯ್ಯ ಅವರ ವರ್ಗಾವಣೆ ಆದೇಶ ವಾರದೊಳಗೆ ರದ್ದಾಗಿದ್ದು,ಇದೇ ಸ್ಥಾನದಲ್ಲಿ ಮುಂದುವರಿಯುವಂತೆ ಹೊಸ ಆದೇಶವಾಗಿದೆ.

ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಅವರನ್ನು ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಭಾರ ವಹಿಸಿಕೊಳ್ಳುವಂತೆ ಪುತ್ತೂರಿನ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರಿಗೆ ಎ. ೨೨ರಂದು ಆದೇಶವಾಗಿತ್ತು. ಇದೀಗ ಈ ಆದೇಶವನ್ನು ರದ್ದುಗೊಳಿಸಿ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಪಟ್ಟಂತೆ ಸರಕಾರದ ಅಧೀನ ಕಾರ್ಯದರ್ಶಿಯವರು ಹೊಸ ಆದೇಶ ಹೊರಡಿಸಿದ್ದಾರೆ. ನಿಂಗಯ್ಯ ಅವರ ವರ್ಗಾವಣೆ ಮತ್ತು ವರ್ಗಾವಣೆ ರದ್ದು ಆದೇಶದ ಬೆಳವಣಿಗೆಗಳ ನಡುವೆ ಹಲವು ರೀತಿಯ ರಾಜಕೀಯ ಪ್ರಭಾವ ಮತ್ತು ಹೊಯ್ದಾಟಗಳು ಬೀರಿದೆ ಎನ್ನಲಾಗುತ್ತಿದೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.