ಶ್ರೀ ಧರ್ಮಶಾಸ್ತಾ ಸೇವಾ ಟ್ರಸ್ಟ್ ರಿ. ಮುಪ್ಪೇರ್ಯ ಇದರ ಆಶ್ರಯದಲ್ಲಿರುವ
ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ
ಪ್ರತಿಷ್ಠಾ ವಾರ್ಷಿಕೋತ್ಸವ ಏ. 25ರಂದು ನಡೆಯಿತು.
ಬೆಳಿಗ್ಗೆ ಗಣಪತಿ ಹೋಮ, ಸಾರ್ವಜನಿಕ ಸತ್ಯನಾರಾಯಣ ಪೂಜೆ, ಶ್ರೀ ವಿಘ್ನೇಶ್ವರ ಭಜಾನ ಮಂಡಳಿ ನೆಟ್ಟಣ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಮಧ್ಯಾಹ್ನ ಶ್ರೀ ಧರ್ಮಶಾಸ್ತಾ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಅಶೋಕ್ ಶೆಟ್ಟಿ ‘ಅರ್ಚನಾ’ ರವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭೆ ಮತ್ತು ಆಶೀರ್ವಚನ ಕಾರ್ಯಕ್ರಮದಲ್ಲಿ ಪರಮಪೂಜ್ಯ ಯೋಗಿ ಕೌಸ್ತುಭ ಕರ್ಮಯೋಗಿ ಶ್ರೀಶ್ರೀಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀ ಮಹಾಲಕ್ಷ್ಮಿ ಕ್ಷೇತ್ರ, ಶ್ರೀಧಾಮ ಮಾಣಿಲ ಮತ್ತು ಪರಮಪೂಜ್ಯ ಶ್ರೀಶ್ರೀಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ, ಶ್ರೀ ದತ್ತಾಂಜನೇಯ ಕ್ಷೇತ್ರ ದಕ್ಷಿಣಗಾನಗಾಪುರ ಆಶೀರ್ವಚನ ನೀಡಿದರು.
ಅತಿಥಿಗಳಾಗಿ ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸವಿತಾ ಗುರುರಾಜ್, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ಗೌರವಾಧ್ಯಕ್ಷ ಯು. ರಾಧಾಕೃಷ್ಣ ರಾವ್ ಉಡುವೆಕೋಡಿ, ಕ್ಷೇತ್ರದ ಗುರುಸ್ವಾಮಿ ಹಾಗೂ ಟ್ರಸ್ಟ್ ನ ಅಧ್ಯಕ್ಷ ದಾಮೋದರ ಕಲ್ಕಳ ಭಾಗವಹಿಸಿದ್ದರು. ಪ್ರತಿಷ್ಠಾ ವಾರ್ಷಿಕೋತ್ಸವ ಸಮಿತಿ ಖಜಾಂಚಿ ಬಾಲಕೃಷ್ಣ ರೈ ಪಾದೆಕಲ್ಲು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಟ್ರಸ್ಟ್ನ ಆಡಳಿತ ಸಮಿತಿ ಕಾರ್ಯದರ್ಶಿ ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ
ಮಧ್ಯಾಹ್ನ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ, ಸಂಜೆ ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಪ್ರಸಾದ ಭೋಜನ ನಡೆಯಿತು. ರಾತ್ರಿ ಪುತ್ತಿಗೆ ರಘುರಾಮ ಹೊಳ್ಳರ ಸಾರಥ್ಯದಲ್ಲಿ, ರಾಮ ಜೋಯಿಷ ಬೆಳ್ಳಾರೆಯವರ ಸಂಯೋಜನೆಯಲ್ಲಿ ಯಕ್ಷಗಾನ ಬಯಲಾಟ ಶಬರಿಮಲೆ ಸ್ವಾಮಿ ಅಯ್ಯಪ್ಪ ನಡೆಯಿತು.