Breaking News

ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ 2021-22  ನೇ ಸಾಲಿನ ಪದವಿ ತರಗತಿಗಳ ಆರಂಭ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸುಳ್ಯದಲ್ಲಿ 2021-22  ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ತರಗತಿ ಆರಂಭದ ಕಾರ್ಯಕ್ರಮವು ನಡೆಯಿತು. ಪದವಿ ತರಗತಿಗಳ ಪ್ರಾರಂಭೋತ್ಸವದ ಜೊತೆಗೆ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ ಜರುಗಿತು.


ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ)ನ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾಪ್ರಸಾದ್ ಕೆ.ವಿ. ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಅವರಿಗೆ ಶುಭ ಹಾರೈಸಿದರು. ಓರಲ್ ಮೆಡಿಸಿನ್ ವಿಭಾಗ ಮುಖ್ಯಸ್ಥ ಡಾ. ಜಯಪ್ರಸಾದ್‌ಆನೆಕಾರ್ ಅತಿಥಿಗಳನ್ನು ಹಾಗೂ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.
ಕಾಲೇಜಿನ ಪ್ರಾಂಶುಪಾಲೆ ಡಾ.ಮೋಕ್ಷಾ ನಾಯಕ್‌ರವರು ಅತಿಥಿಗಳನ್ನು ಹಾಗೂ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಕಾಲೇಜಿನ ಬಗ್ಗೆ ಸೂಕ್ತ ಮಾಹಿತಿಯನ್ನು ನೀಡಿದರು ಹಾಗೂ ಕಾಲೇಜಿನ ಶಿಸ್ತು ಮತ್ತುಅಭ್ಯಾಸ ಕ್ರಮಗಳ ಬಗ್ಗೆ ವಿವರಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸವಣೂರ್ ಸೀತರಾಮ ರೈಯವರನ್ನು ಡಾ.ಕೃಷ್ಣಪ್ರಸಾದ್ ಯಲ್. ಸಭೆಗೆ ಪರಿಚಯಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸವಣೂರ್ ಸೀತರಾಮ ರೈ ಮಾತನಾಡಿ ವಿದ್ಯಾರ್ಥಿಗಳು ಪದವಿಯನ್ನು ಪಡೆಯುವುದರ ಜೊತೆಗೆ ಮಾನವೀಯತೆಯನ್ನು ಬೆಳೆಸಿಕೊಳ್ಳುವಂತೆ ಕರೆನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಡಾ. ರೇಣುಕಾಪ್ರಸಾದ್ ಕೆ.ವಿ. ಯವರು ಸವಣೂರ್ ಸೀತರಾಮ ರೈ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ನೂತನ ವಿದ್ಯಾರ್ಥಿಗಳಿಗೆ ಡಾ.ರೇಣುಕಾಪ್ರಸಾದ್ ಕೆ.ವಿ. ಯವರು ಬಿಳಿಕೋಟುಗಳನ್ನು ಹಾಗೂ ಡಾ. ಮೋಕ್ಷ ನಾಯಕ್ ಹೂಗುಚ್ಛ ನೀಡುವುದರ ಮೂಲಕ ಸ್ವಾಗತಿಸಿದರು.
ಕೆ.ವಿ.ಜಿದಂತ ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಶರತ್‌ಕುಮಾರ್ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿದರು.ನೂತನ ವಿದ್ಯಾರ್ಥಿಗಳ ಪೋಷಕರ ಪರವಾಗಿ ಪುತ್ತೂರಿನ ಖ್ಯಾತ ದಂತ ವೈದ್ಯ ಡಾ.ರಾಜರಾಮ ಕೆ.ಬಿ. ಉಪ್ಪಿನಂಗಡಿಯವರು ಕಾಲೇಜಿನ ದೊರೆಯುವ ಉನ್ನತ ಸೌಲಭ್ಯಗಳ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ಡಾ.ಸುಪ್ರೀಯ ಹೆಚ್.ರವರು ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಆಹ್ವಾನಿತಗಣ್ಯರು, ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನುಡಾ.ಅಂಜಲಿ ಸಜ್ಜನ್‌ಹಾಗೂ ಡಾ.ವಿಷ್ಣುಜನಿರೂಪಿಸಿದರು. ಆಡಳಿತಾಧಿಕಾರಿ ಮಾಧವ ಬಿ.ಟಿ. ಸಹಕರಿಸಿದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.