ದುಗ್ಗಲಾಯ ಮಕ್ಕಳ ಯಕ್ಷಗಾನ ಕಲಾ ಸಂಘದ ವಾರ್ಷಿಕೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಯಕ್ಷ ವೈಭವ, ಸನ್ಮಾನ ಮತ್ತು ಸಾಂಸ್ಕೃತಿಕ ವೈವಿಧ್ಯ
ದುಗಲಡ್ಕದ ಶ್ರೀ ದುಗ್ಗಲಾಯ ಮಕ್ಕಳ ಯಕ್ಷಗಾನ ಕಲಾ ಸಂಘದ 2 ನೇ ವಾರ್ಷಿಕೋತ್ಸವದ ಅಂಗವಾಗಿ ಯಕ್ಷ ವೈಭವ, ಸಾಂಸ್ಕೃತಿಕ ವೈವಿಧ್ಯ ಹಾಗೂ ಸನ್ಮಾನ ಕಾರ್ಯಕ್ರಮವು ಎ. 3೦ರಂದು ದುಗಲಡ್ಕ ಶ್ರೀ ಅಯ್ಯಪ್ಪ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಮಕ್ಕಳ ಯಕ್ಷಕಲಾ ಸಂಘದ ಅಧ್ಯಕ್ಷ ಯತೀಶ್ ರೈ ದುಗಲಡ್ಕ ಅಧ್ಯಕ್ಷತೆ ವಹಿಸಿದ್ದರು. ದುಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ರಾಘವೇಂದ್ರ ಭಟ್ ಕಲ್ದಂಬೆ ಉದ್ಘಾಟನೆ ನೆರವೇರಿಸಿದರು.

ಶುಭನುಡಿಗಳನ್ನಾಡಿದ ಪೈಲಾರು ಶಾಲೆಯ ಸಹಶಿಕ್ಷಕಿ ಶ್ರೀಮತಿ ಪೂರ್ಣಿಮಾರವರು, ಯಕ್ಷಗಾನ ಈ ನೆಲದ ಸಂಸ್ಕೃತಿಯ ಪ್ರತೀಕ. ಮಕ್ಕಳಲ್ಲಿ ಯಕ್ಷಗಾನದ ಅಭಿರುಚಿ ಹುಟ್ಟಿಸಿ ತರಬೇತಿ ನೀಡಿ ಅವರನ್ನು ವೇದಿಕೆ ಹತ್ತಿಸುವ ಮೂಲಕ ಬಾಲಕೃಷ್ಣ ನಾಯರ್ ಕಲೆ ಮತ್ತು ಸಂಸ್ಕೃತಿಯ ಸೇವೆ ಮಾಡುತ್ತಿದ್ದಾರೆ ಎಂದು ಹೇಳಿದರು.

ದುಗಲಡ್ಕ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಶ್ರೀಮತಿ ಸಂಧ್ಯಾ ಈಶ್ವರಕುಮಾರ್, ದುಗ್ಗಲಾಯ ದೈವಸ್ಥಾನದ ಅಧ್ಯಕ್ಷ ಸುಂದರ ರಾವ್ ಕೊಡೆಂಚಡ್ಕ, ದುಗಲಡ್ಕ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷ ದಯಾನಂದ ಸಾಲಿಯಾನ್ ಮೂಡೆಕಲ್ಲು, ಸುಳ್ಯ ಸಿಎ ಬ್ಯಾಂಕ್ ನಿರ್ದೇಶಕ ಹೇಮಂತ್‌ಕುಮಾರ್ ಕಂದಡ್ಕ, ದುಗ್ಗಲಾಯ ದೈವಸ್ಥಾನದ ಕಾರ್ಯದರ್ಶಿ ಕಜೆ ಕುಶಾಲಪ್ಪ ಗೌಡ, ನಗರ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಶೀಲಾವತಿ ದುಗಲಡ್ಕ, ದುಗ್ಗಲಾಯ ಯುವ ಸೇವಾ ಸಂಘದ ಅಧ್ಯಕ್ಷ ನಾರಾಯಣ ನಾಯ್ಕ, ದುಗ್ಗಲಾಯ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ಶ್ರೀಮತಿ ಪ್ರಭಾವತಿ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಗೌರವ ಡಾಕ್ಟರೇಟ್ ಪಡೆದ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಟಿ. ವಿಶ್ವನಾಥ್ ಅವರನ್ನು ಗೌರವಿಸಲಾಯಿತು. ಉದಯೋನ್ಮುಖ ಯಕ್ಷಗಾನ ಕಲಾವಿದರಾದ ಪ್ರಿಯಾ ಮಂಚದಕಲ್ಲು, ಅಕ್ಷತಾ ಚೆನ್ನಡ್ಕ, ಹಿಮ್ಮೇಳ ಕಲಾವಿದ ಗಿರೀಶ್ ಕಕ್ಕೆಬೆಟ್ಟು ಅವರನ್ನು ಸನ್ಮಾನಿಸಲಾಯಿತು. ಸನ್ಮಾನಿತರ ಕುರಿತು ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ ಅಭಿನಂದನಾ ಭಾಷಣಗೈದರು. ಯಕ್ಷಕಲಾ ಸಂಘದ ಅಧ್ಯಕ್ಷ ಯತೀಶ್ ರೈ ದುಗಲಡ್ಕ ಸ್ವಾಗತಿಸಿದರು. ಸಂಚಾಲಕ ಹಾಗೂ ನಾಟ್ಯಗುರು ಬಾಲಕೃಷ್ಣ ನಾಯರ್ ನೀರಬಿದಿರೆ ಪ್ರಸ್ತಾವನೆಗೈದರು. ಶ್ರೀಮತಿ ಶೈಲಜಾ ಜಯರಾಜ್ ವಂದಿಸಿದರು. ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.

ಮಕ್ಕಳ ಕಲಾ ಸಂಘದ ಕಾರ್ಯದರ್ಶಿ ಶ್ರೀಮತಿ ಗಾಯತ್ರಿ ಲೋಕೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.