ಬೆಳ್ಳಾರೆ ಗ್ರಾಮದ ನೆಟ್ಟಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಬೆಳ್ಳಿಹಬ್ಬ ಕಾರ್ಯಕ್ರಮ ಮತ್ತು ಸನ್ಮಾನ ಸಮಾರಂಭವು ಮೇ.07 ರಂದು ನಡೆಯಲಿದೆ.
ಮೀನುಗಾರಿಕೆ ,ಬಂದರು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ. ( ಪ್ರಭಾರ) ಬಿ.ಜಯರಾಮ ರೈ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದ.ಕ.ಹಾಲು ಉತ್ಪಾದಕ ಒಕ್ಕೂಟದ ಮಾಜಿ ಅಧ್ಯಕ್ಷ ಬಿ.ನಿರಂಜನ್, ನಿರ್ದೇಶಕರಾದ ನಾರಾಯಣ ಪ್ರಕಾಶ್ ಕೆ,ಪದ್ಮನಾಭ ಶೆಟ್ಟಿ ಅರ್ಕಜೆ,ಶ್ರೀಮತಿ ಸವಿತಾ ಎನ್.ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಟಿ.ಸುರೇಶ್, ವ್ಯವಸ್ಥಾಪಕರಾದ ಡಾ.ನಿತ್ಯಾನಂದ ಭಕ್ತ, ನೆಟ್ಟಾರು ಹಾಲು ಉತ್ಪಾದಕರ ಸಂಘದ ಸ್ಥಾಪಕಾಧ್ಯಕ್ಷ ಸುಂದರ ಪೂಜಾರಿ,ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಉಪಸ್ಥಿತರಿರುವರು.
ಗೌರವ ಉಪಸ್ಥಿತರಾಗಿ ನೆಟ್ಟಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಬಿ.ಪರಮೇಶ್ವರ ಭಟ್, ಗ್ರಾ.ಪಂ.ಉಪಾಧ್ಯಕ್ಷೆ ಶ್ರೀಮತಿ ಗೌರಿ ಸದಾನಂದ,ಸದಸ್ಯರಾದ ವಿಠಲದಾಸ್,ಶ್ರೀಮತಿ ಶ್ವೇತಾ ಶೈಲೇಶ್, ನೆಟ್ಟಾರು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ವಿಶ್ವನಾಥ ಪೆಲತ್ತಮೂಲೆ, ಅಕ್ಷಯ ಯುವಕ ಮಂಡಲದ ಅಧ್ಯಕ್ಷ ಶ್ರೀಜಿತ್ ರೈ ಮಣಿಕ್ಕಾರ, ಅಕ್ಷತಾ ಮಹಿಳಾ ಮಂಡಲ ಅಧ್ಯಕ್ಷೆ ಶ್ರೀಮತಿ ನಳಿನಿ ಶಶಿಕಾಂತ್ ಉಪಸ್ಥಿತರಿರುವರು.
ಸನ್ಮಾನ
ಹೈನುಗಾರಿಕೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೆ.ವಿಶ್ವನಾಥ ಪೈ, ಹಿರಿಯ ಭತ್ತ ಬೇಸಾಯಗಾರರಾದ ಕೃಷ್ಣಪ್ಪ ಮೂಲ್ಯ ಕೋಡಿಮನೆ, ಖ್ಯಾತ ಗಾಯಕ ಬಾಲಕೃಷ್ಣ ನೆಟ್ಟಾರು ರವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಪ್ರಭಾರ ಅಧ್ಯಕ್ಷ ಲಕ್ಷ್ಮೀನಾರಾಯಣ ಶ್ಯಾನುಭಾಗ್ ತಿಳಿಸಿದ್ದಾರೆ.