ಸವಾರರು ಅಪಾಯದಿಂದ ಪಾರು
ಸುಳ್ಯ ಸೋಣಂಗೇರಿ ಅರ್ತಾಜೆ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಯ ಹೊಂಡಕ್ಕೆ ಬಿದ್ದ ಘಟನೆ ಇಂದು ವರದಿಯಾಗಿದೆ.
ಮೈಸೂರು ಮೂಲದ ಕುಟುಂಬದ ಸದಸ್ಯರು ಧರ್ಮಸ್ಥಳ ಯಾತ್ರೆ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯದಿಂದ ಮೈಸೂರು ತೆರಳುವ ಸಂದರ್ಭ ಈ ಘಟನೆ ಸಂಭವಿಸಿದೆ.
ಅಪಘಾತಕ್ಕೀಡಾದ ವಾಹನದಲ್ಲಿ ಚಾಲಕ ಸೇರಿ ಇಬ್ಬರು ಪುರುಷರು, ಓರ್ವ ಮಹಿಳೆ ಇದ್ದು ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಸ್ಥಳೀಯರ ಸಹಕಾರದಿಂದ ಕಾರನ್ನು ಮೇಲೆ ತರುವ ಕಾರ್ಯ ನಡೆಯಿತು.