45 ಮಂದಿ ಶಿಕ್ಷಕರಿಗೆ ಗೌರವಾರ್ಪಣೆ
ಪೈಲಾರುಶಾಲೆಯಲ್ಲಿ ಸೇವೆ ಸಲ್ಲಿಸಿದ 45 ಮಂದಿ ಶಿಕ್ಷಕರಿಗೆ ಗೌರವಾರ್ಪಣೆಯನ್ನು ಸಲ್ಲಿಸಲಾಯಿತು.
ನ್ಯಾಯವಾದಿ ನಳಿನ್ ಕುಮಾರ್ ಕೋಡ್ತುಗುಳಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲ ವಾಸುದೇವ ಗೌಡ ಪಡ್ಪು ಸನ್ಮಾನಿಸಿದರು. ವಿಶೇಷ ಆಹ್ವಾನಿತರಾಗಿ ಶಿಕ್ಷಣ ಪ್ರೋತ್ಸಾಹಕ ಕಂಬಳ ಆನಂದ ಗೌಡ, ನಿವೃತ್ತ ಮುಖ್ಯ ಶಿಕ್ಷಕ ಪಿ.ಜಿ.ಅಂಬೆಕಲ್ಲು, ಅಭಿಯೋಜನಾ ಇಲಾಖೆ ನಿವೃತ್ತ ಆಡಳಿತಾಧಿಕಾರಿ ರಾಘವ ಗೌಡ ಕಡಪಳ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ಸದಾಶಿವ ಮೂಕಮಲೆ, ಅಧ್ಯಕ್ಷ ಜಯಶಿವ ಮಡಪ್ಪಾಡಿ, ಉಪಾಧ್ಯಕ್ಷ ಕೃಷ್ಣಪ್ಪ ಕೋಡ್ತುಗುಳಿ, ಕೋಶಾಧಿಕಾರಿ ಹರಿಶ್ಚಂದ್ರ ಬಾಬ್ಲುಬೆಟ್ಟು,ಪ್ರಧಾನ ಕಾರ್ಯದರ್ಶಿ ತೇಜಸ್ವಿ ಕಡಪಳ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಶ್ಚಂದ್ರ ಮೋಂಟಡ್ಕ,ಎಸ್.ಡಿ.ಎಂ.ಸಿ.ಅಧ್ಯಕ್ಷ ಯೋಗೀಶ್ ಮಾಡಬಾಕಿಲು, ಮುಖ್ಯ ಶಿಕ್ಷಕಿ ಚಂದ್ರಾವತಿ, ವಿದ್ಯಾರ್ಥಿ ನಾಯಕಿ ಕು.ವಿನ್ಯ ಹಾಗೂ ಸಮಿತಿಯ ಸದಸ್ಯರು, ವಿದ್ಯಾರ್ಥಿ ವೃಂದದವರು, ಪೋಷಕರು ಹಾಗೂ ಊರ ವಿದ್ಯಾಭಿಮಾನಿಗಳು ಭಾಗವಹಿಸಿದರು. ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರ್ವಹಿಸಿದರು.