ಮನಸೂರೆಗೊಂಡ ಸಾಂಸ್ಕೃತಿಕ ವೈಭವ
ಪೈಲಾರು ದ.ಕ.ಜಿ.ಪ.ಹಿ.ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭವು ಮೆ.1 ರಂದು ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಮೀನುಗಾರಿಕೆ ಬಂದರು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ರವರು ವಹಿಸಿದ್ದರು. ಮುಖ್ಯ ಭಾಷಣಕಾರ ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಬಾರ್ಯ ರವರು ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಅತಿಥಿಗಳಾಗಿ ಜಿ.ಪಂ.ಮಾಜಿ ಸದಸ್ಯ ಎಸ್.ಎನ್.ಮನ್ಮಥ, ತಾ.ಪಂ. ಮಾಜಿ ಸದಸ್ಯ ರಾಧಾಕೃಷ್ಣ ಬೊಳ್ಳೂರು, ಅಮರಮುಡ್ನೂರು ಪಂ.ಸದಸ್ಯ ಕೃಷ್ಣ ಪ್ರಸಾದ್ ಮಾಡಬಾಕಿಲು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಹಿರಿಯರಾದ ಪ್ರಗತಿಪರ ಕೃಷಿಕ ಪುಟ್ಟಣ್ಣ ಗೌಡ ನಾಯರ್ ಕಲ್ಲು, ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಸದಾಶಿವ ಗೌಡ ಮೂಕಮಲೆ, ಅಧ್ಯಕ್ಷ ಜಯಶಿವ ಮಡಪ್ಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಶ್ಚಂದ್ರ ಮೋಂಟಡ್ಕ, ಎಸ್.ಡಿ.ಎಂ.ಸಿ.ಅಧ್ಯಕ್ಷ ಯೋಗೀಶ್ ಮಾಡಬಾಕಿಲು, ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಚಿವ ಎಸ್ .ಅಂಗಾರ ರವರನ್ನು ಹಾಗೂ ರಾಧಾಕೃಷ್ಣ ಬೊಳ್ಳೂರು, ಕೃಷ್ಣಪ್ರಸಾದ್ ಮಾಡಬಾಕಿಲು, ರಜನಿಕಾಂತ್ ಉಮ್ಮಡ್ಕ,ದೇವಿದಾಸ ಮೋಂಟಡ್ಕ, ಯೋಗೀಶ್ ಮಾಡಬಾಕಿಲು ರವರನ್ನು ಶತಮಾನೋತ್ಸವ ಸಮಿತಿ ಪರವಾಗಿ ಸನ್ಮಾನಿಸಲಾಯಿತು.
ಉಪಾಧ್ಯಕ್ಷ ಕೃಷ್ಣಪ್ಪ ಕೋಡ್ತುಗುಳಿ ಸ್ವಾಗತಿಸಿದರು. ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ಸುಶ್ಮಿತಾ ಕಡಪಳ ಕಾರ್ಯಕ್ರಮ ನಿರೂಪಿಸಿದರು.
ಶತಮಾನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಾಗಿ ಗಾಯಕ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ನಡೆಯಿತು. ಬಳಿಕ ಪೈಲಾರು ಶಾಲಾ ವಿದ್ಯಾರ್ಥಿಗಳು, ಶೌರ್ಯ ಯುವತಿ ಮಂಡಲ, ಸುಳ್ಯ ಬಾಯ್ಸ್ ರವರಿಂದ ನೃತ್ಯ – ಹಾಸ್ಯ ವೈಭವ, ಯಕ್ಷಗಾನ ಕಾರ್ಯಕ್ರಮ ಪ್ರದರ್ಶನವಾಯಿತು. ರಮೇಶ್ ಮೆಟ್ಟಿನಡ್ಕರಿಂದ ಗೀತ ಸಂಭ್ರಮ, ಮಸ್ಕಿರಿ ಕುಡ್ಲ ಕಲಾವಿದರಿಂದ ತೆಲಿಕೆ ಬಂಜಿ ನಿಲಿಕೆ ಪ್ರದರ್ಶನಗೊಂಡಿತು. ಆಗಮಿಸಿದ ಎಲ್ಲರಿಗೂ ರಾತ್ರಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಶತಮಾನೋತ್ಸವ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಎಸ್.ಡಿ.ಎಂ.ಸಿ.ಸದಸ್ಯರು, ಉಪ ಸಮಿತಿ ಸಂಚಾಲಕರು, ಸದಸ್ಯರು, ವೃಂದದವರು, ವಿದ್ಯಾರ್ಥಿಗಳು, ಪೋಷಕರು ಹಾಗೂಊರ ವಿದ್ಯಾಭಿಮಾನಿಗಳು ಸಹಕರಿಸಿದರು.