ಅರಂತೋಡು ಗ್ರಾಮದ ತೋಟಂಪಾಡಿ ಉಳ್ಳಾಕುಳು, ಉಳ್ಳಾಲ್ತಿ ಮತ್ತು ಸಹ ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮೇ.13ರಿಂದ ಮೇ.15ರವರೆಗೆ ಜರುಗಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಮೇ.2ರಂದು ಬಿಡುಗಡೆಗೊಳಿಸಲಾಯಿತು.
ಅರಂತೋಡು ನೆಹರೂ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ನಿವೃತ್ತ ವಿಶ್ರಾಂತ ಪ್ರಾಂಶುಪಾಲ ಕೆ.ಆರ್. ಗಂಗಾಧರ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರ.ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯು.ಎಸ್. ಮೇದಪ್ಪ, ಜೀರ್ಣೋದ್ಧಾರ ಸಮಿತಿ ಪ್ರ.ಕಾರ್ಯದರ್ಶಿ ಗೋಪಾಲ ಗೌಡ ಅಳಿಕೆ, ಜೀರ್ಣೋದ್ಧಾರ ಸಮಿತಿ ಖಜಾಂಜಿ ಧನಂಜಯ ಕಲ್ಲುಗದ್ದೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಕಿಶೋರ್ ಕುಮಾರ್ ಯು.ಯಂ. ಸೇರಿದಂತೆ ವಿವಿಧ ಉಪಸಮಿತಿಯ ಪದಾಧಿಕಾರಿಗಳು, ಬೈಲುವಾರು ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.