ಧಾರ್ಮಿಕ ಕ್ಷೇತ್ರದ ಗಣನೀಯ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಆರ್ಯಭಟ ಸಾಂಸ್ಕೃತಿಕ ಸಂಘಟನೆ ಕೊಡ ಮಾಡಲ್ಪಡುವ ಅಂತರ್ ರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಸುಳ್ಯ ರಾಘವೇಂದ್ರ ಮಠದ ಆಡಳಿತ ಮಂಡಳಿಯ ಅಧ್ಯಕ್ಷ ಎಂ.ಎನ್. ಶ್ರೀಕೃಷ್ಣ ಸೋಮಯಾಗಿ ಯವರು ಆಯ್ಕೆಯಾಗಿರುತ್ತಾರೆ.
ಮೆ .25 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿರುವರು. ಇವರು ಸುಳ್ಯ ಬೃಂದಾವನಾ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾಗಿ, ಸುಳ್ಯ ರಾಘವೇಂದ್ರ ಮಠದ ನಿರ್ಮಾಣ ಕಾರ್ಯದಲ್ಲಿ ಅವಿರತವಾಗಿ ತೊಡಗಿಸಿಕೊಂಡು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ಸು ಕಂಡುಕೊಂಡಿರುತ್ತಾರೆ.
ಪ್ರಗತಿಪರ ಕೃಷಿಕರೂ,ಉದ್ಯಮಿಗಳು ಎಂದೆನಿಸಿಕೊಂಡಿರುವ ಇವರು ಸುಳ್ಯದಲ್ಲಿ ಹಲವಾರು ವರ್ಷಗಳಿಂದ ಸ್ವಾತಿ ಸಿಟಿ ಲಾಡ್ಜ್ ಹಾಗೂ ಕಾಂತಮಂಗಲದಲ್ಲಿ ಸ್ವಾತಿ ನರ್ಸರಿಯನ್ನು ನಡೆಸಿಕೊಂಡು ಬರುತ್ತಿದ್ದಾರೆ.
ತಾಲೂಕಿನ
ಹಲವಾರು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುತ್ತಾರೆ. ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಯಾಗಿ ಇತ್ತೀಚೆಗೆ ಸೇವೆ ಸಲ್ಲಿಸಿದ್ದರು.