ಅಕ್ರಮವಾಗಿ ಮದ್ಯ ಮಾರಾಟ : ಆರೋಪಿಗಳು ದೋಷಮುಕ್ತ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಪರವಾನಿಗೆ ಇಲ್ಲದೇ ಸಾರ್ವಜನಿಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದರು ಎಂಬ ಆರೋಪ ಎದುರಿಸುತ್ತಿದ್ದ ಆರೋಪಿಗಳನ್ನು ದೋಷಮುಕ್ತಗೊಳಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ.

2017 ರ ಒಕ್ಕೋಬರ್ 30 ರಂದು ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಗಿರಾಕಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮದ್ಯ ಮಾರಾಟ ಮಾಡುವ ಉದ್ದೇಶದಿಂದ ತಮ್ಮ ಕಾರಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು ಎಂಬ ಆರೋಪದ ಮೇರೆಗೆ ಸುಳ್ಯದ ಪೊಲೀಸರು ಆರೋಪಿಗಳಾದ ದಿನೇಶ , ರವೀಶ್ ಎಂಬುವರನ್ನು ಬಂಧಿಸಿ ಉಳಿದ ಇಬ್ಬರು ಆರೋಪಿಗಳಾದ ಪ್ರಕಾಶ ಹಾಗು ರದೀಶರ ವಿರುದ್ದ ಕಾನುನು ಕ್ರಮ ತೆಗೆದುಕೊಂಡು ಬಳಿಕ ಇಬ್ಬರು ಆರೋಪಿಗಳನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿ ನಂತರ ಎಲ್ಲ ಆರೋಪಿಗಳ ವಿರುದ್ದ ದೋಷರೋಪಣ ಪಟ್ಟಿಯನ್ನು ಕರ್ನಾಟಕ ಅಬಕಾರಿ ಕಾಯ್ದೆಡಿಯಲ್ಲಿ ಸಲ್ಲಿಸಲಾಗಿತ್ತು.
ಈ ಪ್ರಕರಣವನ್ನು ತನಿಖೆಗೆತ್ತಿಕೊಂಡ ಹಿರಿಯ ಸಿವಿಲ್ ಹಾಗೂ ಜೆ. ಯಮ್. ಎಫ್. ಸಿ ನ್ಯಾಯಾಲಯ ಇದರ ನ್ಯಾಯಾಧೀಶರಾದ ಸೋಮಶೇಖರ್ ರವರು ಆರೋಪಿಗಳ ವಿರುದ್ದ ಅಭಿಯೋಜನೆಯು ಮಾಡಿರುವ ಆರೋಪವನ್ನು ಸಾಬೀತುಪಡಿಸಲು ಅಭಿಯೋಜನೆ ವಿಫಲವಾಗಿದೆ ಎಂಬ ಕಾರಣವನ್ನು ನೀಡಿ ಆರೋಪಿಗಳನ್ನು ದೋಷಮುಕ್ತಗೊಳಿಸಿ ತೀರ್ಪಿತ್ತಿದ್ದಾರೆ . ಆರೋಪಿಗಳ ಪರವಾಗಿ ಸುಳ್ಯದ ನ್ಯಾಯವಾದಿಗಳಾದ ಯಂ. ವೆಂಕಪ್ಪ ಗೌಡ,ಚಂಪಾ ವಿ. ಗೌಡ, ರಾಜೇಶ್ ಬಿ.ಜಿ.,ಶ್ಯಾಮ್ ಪ್ರಸಾದ್ ಹಾಗೂ ಮನೋಜ್‌ರವರು ವಕಾಲತ್ತು ವಹಿಸಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.