ಮಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿ ನಿಯಮಿತದ ಸುಳ್ಯ ಶಾಖೆಯು ಮೇ. 6 ರಂದು ಸಂಜೆ 4.30ಕ್ಕೆ ಸುಳ್ಯದ ಶ್ರೀರಾಮ್ ಪೇಟೆಯಲ್ಲಿರುವ ಸಾಯಿರಾಮ್
ಕಾಂಪ್ಲೆಕ್ಸ್ನಲ್ಲಿ ಉದ್ಘಾಟನೆಗೊಳ್ಳಲಿದೆ.
ಸಭಾ ಕಾರ್ಯಕ್ರಮವು ಶ್ರೀರಾಮ ಭಜನಾ ಮಂದಿರದಲ್ಲಿ ನಡೆಯಲಿದ್ದು, ಒಡಿಯೂರು ಮಹಾಸಂಸ್ಥಾನದ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಮೀನುಗಾರಿಕೆ, ಬಂದರು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರರವರು ಕಾರ್ಯಕ್ರಮ ಉದ್ಘಾಟಿಸಲಿರುವರು.
ಪ್ರಣವ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜಿ ಆರ್ ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ, ಎ ಓ ಎಲ್ ಇ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ., ಹಿರಿಯ ಸಹಕಾರಿ ಮತ್ತು ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ಚಂದ್ರ ಎಸ್.ಆರ್. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ಆಡಳಿತ ಮಂಡಳಿ ತಿಳಿಸಿದೆ.
ಸಭಾ ಕಾರ್ಯಕ್ರಮದ ಮೊದಲು ಮತ್ತು ನಂತರ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ಶಾಂತಿನಗರ ಇವರಿಂದ ಭಜನಾ ಸೇವೆ ಹಾಗೂ ಟೀಮ್ ಟ್ಯಾಲೆಂಟ್ ಹಂಟರ್ಸ್ ವತಿಯಿಂದ ಕೊಳಲು ವಾದನ ಮತ್ತು ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿರುವುದು.
ಈಗಾಗಲೇ ಯೆಯ್ಯಾಡಿ, ವಾಮಂಜೂರು, ಬೆಂಗ್ರೆ, ಎಡಪದವು ಹಾಗೂ ಪುತ್ತೂರಿನಲ್ಲಿ ಶಾಖೆಗಳಿವೆ.