ಗಾಂಧಿನಗರ : ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿರುವ ಬಾಡಿಗೆ ಮನೆಯಲ್ಲಿ ವರದಿಯಾಗಿದೆ.

ಸುಳ್ಯ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಎಂಬವರ ಪುತ್ರಿ ಆಯೀಶಾ ಎಂಬವರು ಆತ್ಮಹತ್ಯೆ ಮಾಡಿಕೊಂಡ ಯುವತಿ.
ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಈಕೆಯನ್ನು ನೋಡಿದ ಮನೆಯವರು ಕೂಡಲೇ ಕೆಳಗಿಳಿಸಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರು. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಯುವತಿ ಮೃತಪಟ್ಟಿದ್ದಾರೆಂದು ತಿಳಿಸಿದರೆನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಇವರು ಸುಳ್ಯ, ಬೆಟ್ಟಂಪ್ಪಾಡಿ, ಜಟ್ಟಿಪಳ್ಳ ಮುಂತಾದ ಕಡೆಗಳಲ್ಲಿ ಈ ಹಿಂದೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಕಳೆದ ವರ್ಷವಷ್ಟೇ ಕಾಸರಗೋಡು ಮಂಙಪಾರೆಯ ಯುವಕನೊಂದಿಗೆ ವಿವಾಹ ಮಾಡಿಕೊಡಲಾಗಿದ್ದು, ಪತಿ ವಿದೇಶದಲ್ಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.