ಬೆಳ್ಳಾರೆಯ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯ
3ನೇ ವರ್ಷದ ವಾರ್ಷಿಕೋತ್ಸವ
ಮೇ. 7ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಾಂಗಣದಲ್ಲಿ ನಡೆಯಿತು.
ಬೆಳಿಗ್ಗೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಉದಯ ಕೆ.ಯವರು ದೀಪ ಪ್ರಜ್ವಲನೆಗೊಳಿಸಿದರು. ನಂತರ ಶ್ರೀ ಸತ್ಯನಾರಾಯಣ ಪೂಜೆ, ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಶ್ರೀಮತಿ ಸುಮಾ ವಾಸುದೇವ ಆಚಾರ್ಯ ಭಜನಾ ಕಾರ್ಯಕ್ರಮ ನಿರೂಪಿಸಿದರು.
ಸತ್ಯನಾರಾಯಣ ಪೂಜಾ ಸಮಾಪ್ತಿಯ ಬಳಿಕ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಅಧ್ಯಕ್ಷ ಮಧ್ವಾಧೀಶ ವಿಠಲದಾಸ ನಾಮಾಂಕಿತ ರಾಮಕೃಷ್ಣ ಕಾಟುಕುಕ್ಕೆಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ತು ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಸುಳ್ಯ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯೆ ಶ್ರೀಮತಿ ರಾಜೀವಿ ಆರ್.ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿ ಅಧ್ಯಕ್ಷೆ ಶ್ರೀಮತಿ ಶರ್ಮಿಳಾ ವಿ. ರೈ. ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಮತಿ ವಾಣಿಶ್ರೀ ಸೇಮಿತ ವಂದಿಸಿದರು.
ಉಪಾಧ್ಯಕ್ಷೆ ಶ್ರೀಮತಿ ಹರಿಣಿರಾಜ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ರಾಮಕೃಷ್ಣ ಕಾಟುಕುಕ್ಕೆ ದಂಪತಿಯನ್ನು ಗೌರವಿಸಲಾಯಿತು. ಭಜನಾ ಮಂಡಳಿ ಸದಸ್ಯರು ಸಹಕಾರ ನೀಡಿದರು.