ಸುದ್ದಿ ಜನಾಂದೋಲನದ ಲಂಚ ಭ್ರಷ್ಟಾಚಾರ ವಿರೋಧಿ ವಾರ್ಡ್ ಅಭಿಯಾನಕ್ಕೆ ಮೇ.7ರಂದು ಜಟ್ಟಿಪಳ್ಳದಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ತಹಶಿಲ್ದಾರ್ ಕು. ಅನಿತಾಲಕ್ಷ್ಮಿ ಚಾಲನೆ ನೀಡಿ, ಶುಭಹಾರೈಸಿದರು. ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ. ಉಮ್ಮರ್ ಬೀಜದಕಟ್ಟೆ, ಸುದ್ದಿ ಸಮೂಹ ಮಾಧ್ಯಮ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದ, ಸುಳ್ಯ ತಾಲೂಕು ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು, ನಿವೃತ್ತ ಪ್ರಾಂಶುಪಾಲ, ಅರ್ಥಶಾಸ್ತ್ರಜ್ಞ ಪ್ರಭಾಕರ ಶಿಶಿಲ, ಕ.ಸಾ.ಪ. ಕೋಶಾಧಿಕಾರಿ ದಯಾನಂದ ಆಳ್ವ, ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್, ಫೆಡರಲ್ ಬ್ಯಾಂಕ್ ಉಪ ವ್ಯವಸ್ಥಾಪಕ ಸಂಭ್ರಮ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.