ಕೂತ್ಕುಂಜ ಶಿವಾಜಿ ಯುವಕ ಮಂಡಲ ಇದರ ಆಶ್ರಯದಲ್ಲಿ ಕುತ್ಕೂಂಜ ಶಾಲಾ ವಠಾರದಲ್ಲಿ ನೇತ್ರ ತಪಾಸಣಾ ಶಿಬಿರ, ನೋಂದಾವಣೆ ಶಿಬಿರ ಏ. 24ರಂದು ನಡೆಯಿತು.
ವೆಂಕಟೇಶ್ವರ ಜೋಯಿಸ್ ಹೆಬ್ಬಾರ ಹಿತ್ಲು ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಜ್ವಲ್ ಚಿದ್ಗಲ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ , ಕೂತ್ಕುಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್ ಡಿಎಂಸಿ ಅಧ್ಯಕ್ಷೆ ವನಿತಾ ಕಕ್ಯಾನ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಕುಕ್ಕುಪುಣಿ, ಮಂಗಳೂರು ಪ್ರಸಾದ್ ನೇತ್ರಾಲಯದ ಡಾ. ಮೈತ್ರಿ PROನಿಶ್ಚಿತ್ ಇದ್ದರು. ಶಿವಾಜಿ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸ್ವಾಗತಿಸಿದರು.
ಜಯರಾಮ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು. 43 ಮಂದಿ ಕಣ್ಣಿನ ತಪಾಸಣೆಯನ್ನು ಮಾಡಿಸಿದರು 21 ಜನ ನೇತ್ರದಾನ ಮಾಡಲು ಹೆಸರು ನೋಂದಾಯಿಸಿದರು.