ಸಂಪಾಜೆ ಗ್ರಾ.ಪಂ.ನ ಗ್ರಾಮಸಭೆಯು ಪಂಚಾಯತ್ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ. ಹಮೀದ್ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಸರಿಯಾದ ಉತರ ಕೊಡದೆ ಭರವಸೆ ಮಾತ್ರ ನೀಡುತ್ತಾರೆ ಎಂದು ಮೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅರಣ್ಯ ಇಲಾಖೆಗೆ ಸಂಬಂಧ ಪಟ್ಟ ಸಮಸ್ಯೆಗಳು ಸಭೆಯಲ್ಲಿ ಚರ್ಚೆಗೆ ಬಂದಾಗ ಸಮರ್ಪಕ ಉತ್ತರ ಅಧಿಕಾರಿಗಳು ನೀಡಿದರು.