ಮಾಜಿ ಸಚಿವೆ ಉಮಾಶ್ರೀ ಸಹಿತ ಹಲವು ಗಣ್ಯರು ಭಾಗಿ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜಾಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಪರಿಕಲ್ಪನೆಯ “ನಾ ನಾಯಕಿ” ಎಂಬ ಕಾರ್ಯಕ್ರಮದಡಿ ಮಹಿಳೆಯರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಮಹಿಳಾ ಸಮಾವೇಶ ನಡೆಯಲಿದ್ದು ಆ ಪ್ರಯುಕ್ತ ಮೇ. 11 ಪೂ. ಗಂಟೆ 10.30ಕ್ಕೆ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ
ಮಹಿಳಾ ಸಮಾವೇಶದ ಪೂರ್ವ ಭಾವಿ ಸಭೆ ನಡೆಯಲಿದೆ.
ಈ ಸಭೆಯಲ್ಲಿ
ಮಹಿಳಾ ಸಂಘಟನೆಯ ಅಧ್ಯಕ್ಷರಾದ ಮಾಜಿ ಸಚಿವೆ ಶ್ರೀಮತಿ ಉಮಾಶ್ರೀ ಯವರು, ಅಕ್ಕೈ ಪದ್ಮಸಾಲಿ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಉಪಸ್ಥಿತರಿರಲಿದ್ದಾರೆ. ದ. ಕ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ನಾಯಕರು, ಪದಾಧಿಕಾರಿಗಳು, ಭಾಗವಹಿಸಲಿದ್ದಾರೆ.
ಆದ್ದರಿಂದ ಸುಳ್ಯ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು, ಪ್ರಮುಖ ನಾಯಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು,ಹಾಗೂ ಅಭ್ಯರ್ಥಿ ಗಳು, ಹಾಗೂ ಸುಳ್ಯ ಬ್ಲಾಕ್ ವ್ಯಾಪ್ತಿಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಭಾಗವಹಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಹಾಗೂ ಮಹಿಳಾ ಘಟಕ ಅಧ್ಯಕ್ಷೆ ಗೀತಾ ಕೋಲ್ಚಾರ್ ತಿಳಿಸಿದ್ದಾರೆ.
ಪೂರ್ವ ಭಾವಿ ಸಭೆಯ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರು ZOOM ಮೂಲಕ ಸಂವಾದ ನಡೆಸಲಿದ್ದಾರೆ.