ಓಬಿಸಿ ಮೋರ್ಚಾವನ್ನು ತಳಮಟ್ಟದಿಂದ ಕಟ್ಟುವ ಪ್ರಯತ್ನ : ವಿವೇಕಾನಂದ ಡಬ್ಬಿ
ಹಿಂದುಳಿದ ವರ್ಗಗಳ ಮೋರ್ಚಾವನ್ನು ತಳಮಟ್ಟದಲ್ಲಿ ಕಟ್ಟುವುದಕ್ಕಾಗಿ ರಾಜ್ಯ ಪದಾಧಿಕಾರಿಗಳು ಮಂಡಲ ಮಟ್ಟದ ಪ್ರವಾಸ ಮಾಡಲಾಗುತ್ತಿದೆ ” ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಹೇಳಿದ್ದಾರೆ.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲದ ವತಿಯಿಂದ ಶ್ರೀ ವೆಂಕಟ್ರಮಣ ದೇವ ಮಂದಿರದ ಶ್ರೀನಿವಾಸ ಪದ್ಮಾವತಿ ಸಭಾಭವನದಲ್ಲಿ ನಡೆದ ಓಬಿಸಿ ಮೋರ್ಚಾ ವಿಶೇಷ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
” 2023 ಮತ್ತು 2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ದೊಡ್ಡ ಜವಾಬ್ದಾರಿ ಕಾರ್ಯಕರ್ತರ ಮೇಲೆ ಇದೆ. ಸರಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಆಗಬೇಕಾಗಿದೆ. ಅದಕ್ಕಾಗಿ ಬೂತ್ ಮಟ್ಟದಲ್ಲಿ ಒ.ಬಿ.ಸಿ.ಮೋರ್ಚಾ ಘಟಕ ಮಾಡಲಿದ್ದೇವೆ ” ಎಂದು ಅವರು ಹೇಳಿದರು.
ಒಬಿಸಿ ಮೋರ್ಚಾ ತಾಲೂಕು ಅಧ್ಯಕ್ಷ ಚಂದ್ರಶೇಖರ ಪನ್ನೆ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಠಲ್ ಪೂಜಾರಿ, ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ ರೆಂಜ,
ಓಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಕೃಷ್ಣಮೂರ್ತಿ ಮತ್ತು ಸುರೇಶ್ ಕಣೆಮರಡ್ಕ, ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿಲ್ಲಾ ಪ್ರಭಾರಿ ಭರತ್ ಸೂಟರ್ ಪೇಟೆ, ಮುಖಂಡರಾದ ಉದಯಕುಮಾರ್, ಮೋನಪ್ಪ ದೇವಸ್ಯ, ಓಬಿಸಿ
ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ನವೀನ್ಕುಮಾರ್ ಸಾರಕೆರೆ, ಚಂದ್ರಶೇಖರ ಕೇರ್ಪಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿಂದುಳಿದ ವರ್ಗಗಳ ಮೋರ್ಚಾ ಮಂಡಲ ಅಧ್ಯಕ್ಷ ಚಂದ್ರಶೇಖರ ಪನ್ನೆ ಸ್ವಾಗತಿಸಿ, ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ ರೆಂಜ ಪ್ರಾಸ್ತಾವಿಕವಾಗಿ ಮಾತನಾಡಿದರು.ಓಬಿಸಿ ಮಂಡಲ ಪ್ರಧಾನ ಕಾರ್ಯದರ್ಶಿ ನವೀನ್ಕುಮಾರ್ ಸಾರಕೆರೆ ವಂದಿಸಿದರು. ಸುದರ್ಶನ ಪಾತಿಕಲ್ಲು ಕಾರ್ಯಕ್ರಮ ನಿರೂಪಿಸಿದರು. ಶಾಸಕ ಎಸ್.ಅಂಗಾರ ಅವರ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಧನಂಜಯ ಅವರನ್ನು ಸನ್ಮಾನಿಸಲಾಯಿತು. ಬಳಿಕ ಧನಂಜಯ ಅವರು ಪಕ್ಷಕ್ಕೆ ಸೇರ್ಪಡೆಯಾದರು.