ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯ ಸ್ಮಾರಕ ನಿರ್ಮಾಣಕ್ಕೆ ಸಿಎಂಗೆ ಮನವಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಬಂಗ್ಲೆಗುಡ್ಡೆಯಲ್ಲಿ ೧೮೩೭ ರ ಅಮರ ಸುಳ್ಯದ ರೈತ ಹೋರಾಟಗಾರರ ಸ್ಮಾರಕ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದ್ದು, ಅದನ್ನು ಶೀಘ್ರ ಕೈಗೆತ್ತಿಕೊಂಡು ಸರ್ಕಾರ ನೀಡಿದ ಭರವಸೆಯನ್ನು ಈಡೇರಿಸಬೇಕೆಂದು ಡಾ.ಪ್ರಭಾಕರ ಶಿಶಿಲರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಚಿವ ಎಸ್. ಅಂಗಾರ, ಉಸ್ತುವಾರಿ ಸಚಿವ ಸುನಿಲ್‌ಕುಮಾರ್ ಸಂಸದ ನಳಿನ್‌ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.


2021 ರ ಮಾರ್ಚ್ 27 ರಂದು ಬೆಳ್ಳಾರೆ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯ ಸ್ಮಾರಕ ನಿರ್ಮಾಣದ ಬಗ್ಗೆ ನಡೆದ ಸಾರ್ವಜನಿಕ ಸಭೆಯಲ್ಲಿ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್ ಅಂಗಾರರವರು ಘೋಷಣೆ ಮಾಡಿದ್ದರು. ಭವನದ ಸುತ್ತ ಸುಂದರ ಉದ್ಯಾನವನ ನಿರ್ಮಾಣ ಮಾಡುವುದಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಕುಮಾರ್ ಭರವಸೆ ನೀಡಿದ್ದರು. ೧೪ ತಿಂಗಳುಗಳು ಉರುಳಿದರೂ ಸ್ಥಳ ವಶೀಕರಣ ಒಂದನ್ನು ಬಿಟ್ಟರೆ ಬೇರೆ ಯಾವುದೇ ಪ್ರಗತಿಯಾಗಿಲ್ಲ. ಈ ಕಾರ್ಯವನ್ನು ಆದಷ್ಟು ಬೇಗ ಕೈಗೊಂಡು ಹುತಾತ್ಮ ರೈತರಿಗೆ ಗೌರವ ಅರ್ಪಿಸಬೇಕೆಂದು ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.