*ಡಾ.ಅಚ್ಚುತ್ತ ಪೂಜಾರಿ ಬಂಟ್ವಾಳಕ್ಕೆ ವರ್ಗ*
ಸುಳ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಒಂಭತ್ತು ವರ್ಷಗಳಿಂದ ದೈಹಿಕ ಶಿಕ್ಷಣ ನಿರ್ದೇಶಕರಾಗಿದ್ದ ಸತೀಶ್ ಕೊಯಿಂಗಾಜೆ ಅದೇ ಕಾಲೇಜಿನ ಪ್ರಾಂಶುಪಾಲರಾಗಿ ಪ್ರಭಾರ ವಹಿಸಿಕೊಂಡಿದ್ದಾರೆ.
ಸತೀಶ್ ರವರು ಈ ಹಿಂದೆ ಸುಳ್ಯ ನೆಹರು ಮೆಮೊರಿಯಲ್ ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕರಾಗಿ, ಸರಕಾರಿ ಪ್ರಥಮ ದರ್ಜೆ ಕೋಟ ಪಡುಕರೆಯಲ್ಲಿ ಮೂರುವರೆ ವರ್ಷ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ, 9 ವರ್ಷಗಳ ಹಿಂದೆ ಸುಳ್ಯಕ್ಕೆ ಬಂದಿದ್ದರು. ಇದೀಗ ಅವರು ಪ್ರಭಾರ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಸುಳ್ಯ ಡಿಗ್ರಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದ ಡಾ.ಅಚ್ಚುತ ಪೂಜಾರಿ ಯವರು ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆ ಗೊಂಡಿದ್ದಾರೆ. 12 ವರ್ಷಕ್ಕೂ ಹೆಚ್ಚುಕಾಲ ಒಂದೇ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ ಉಪನ್ಯಾಸಕರನ್ನು ಸರಕಾರ ಕಡ್ಡಾಯ ವರ್ಗಾವಣೆ ನೆಲೆಯಲ್ಲಿ ಒಂದು ತಿಂಗಳ ಹಿಂದೆ ವರ್ಗಾವಣೆ ಮಾಡಿ ಆದೇಶ ಮಾಡಿತ್ತು. ಈ ಆದೇಶದನ್ವಯ ಡಾ.ಅಚ್ಚುತ ಪೂಜಾರಿಯವರು ಬಂಟ್ವಾಳಕ್ಕೆ ವರ್ಗಾವಣೆಯಾಗಿದ್ದಾರೆ.
ಅಚ್ಚುತ ಪೂಜಾರಿಯವರಿ ಕಾಲೇಜು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಇವರು ಪ್ರಾಂಶುಪಾಲರಾಗಿದ್ದ ಅವಧಿಯಲ್ಲಿ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಯಿತು.