Breaking News

ಕೊಳ್ತಿಗೆ ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಪೆರ್ಲಂಪಾಡಿಯಲ್ಲಿ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾಟ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಮರಾಟಿ ಸಮಾಜ ಸೇವಾ ಸಂಘ ಕೊಳ್ತಿಗೆ, ಪೆರ್ಲಂಪಾಡಿ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕಿನ ತಾಲೂಕು ಮಟ್ಟದ ಮರಾಟಿ ಸಮಾಜ ಬಾಂಧವರ ಪುರುಷರ ಮುಕ್ತ ವಾಲಿಬಾಲ್ ಪಂದ್ಯಾಟ ಶಿವಾಜಿ ಟ್ರೋಫಿ 2022 ಮೇ. 15ರಂದು ಪೆರ್ಲಂಪಾಡಿ ಸ.ಹಿ.ಪ್ರಾ. ಶಾಲಾ ಆವರಣದಲ್ಲಿ ನಡೆಯುತ್ತಿದೆ.

ಕೊಳ್ತಿಗೆ ಪೆರ್ಲಂಪಾಡಿ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್. ಪದ್ಮನಾಭ ಸರಸ್ವತಿಮೂಲೆಯವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭವನ್ನು ಬೆಳ್ಳಾರೆ ಪೊಲೀಸ್ ಠಾಣಾ ಠಾಣಾಧಿಕಾರಿ ರುಕ್ಮ ನಾಯ್ಕ್ ಉದ್ಘಾಟಿಸಿದರು. ಸುಳ್ಯ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ಈಶ್ವರ ವಾರಣಾಶಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶ್ರೀಮತಿ ಪೂರ್ಣಿಮಾ ಎಂ. ಪ್ರಾರ್ಥಿಸಿದರು. ಸಂಘದ ಸಂಘಟನಾ ಕಾರ್ಯದರ್ಶಿ ಸುಬ್ಬಯ್ಯ ಕೆ. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ವಿಜೇತರಿಗೆ ಶಿವಾಜಿ ಟ್ರೋಫಿ 2022ರೊಂದಿಗೆ ಪ್ರಥಮ ಬಹುಮಾನ ರೂ. 5000/-, ದ್ವಿತೀಯ ರೂ. 3000/-, ತೃತೀಯ ರೂ. 1000/- ಮತ್ತು ಉತ್ತಮ ಹೊಡೆತಗಾರ, ಉತ್ತಮ ಎಸೆತಗಾರ, ಉತ್ತಮ ಸರ್ವಾಂಗೀಣ ಆಟಗಾರ ಬಹುಮಾನ ಪಡೆದುಕೊಳ್ಳಲಿದ್ದಾರೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.