ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಸುಬ್ರಹ್ಮಣ್ಯ ಜೋಷಿ ಯವರಿಗೆ ಸುಳ್ಯ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ 20 ಅಂಶ ಸಭೆಯಲ್ಲಿ ಬೀಳ್ಕೊಡುಗೆ ಸಮಾರಂಭವು ಮೇ 7ರಂದು ಸುಳ್ಯ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು . ಸುಳ್ಯ ಸಿ .ಎ ಬ್ಯಾಂಕ್ ನ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ ಮತ್ತು ಸುಳ್ಯ ತಾಲೂಕು ಸಹಕಾರಿ ಯೂನಿಯನ್ ನ ನಿರ್ದೇಶಕ ಶೈಲೇಶ್ ಅಂಬೆಕಲ್ಲು ರವರು ಸನ್ಮಾನಿಸಿ ನಿವೃತ್ತ ಜೀವನಕ್ಕೆ ಶುಭಹಾರೈಸಿದರು. ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಸುಳ್ಯ ಶಾಖಾ ವ್ಯವಸ್ಥಾಪಕ ವಿಶ್ವನಾಥ ಶೆಟ್ಟಿ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ , ಕಾರ್ಯನಿರ್ವಹಣಾಧಿಕಾರಿಗಳ ಸಂಘದ ಅಧ್ಯಕ್ಷ ನೇಮಿರಾಜ ಪಲ್ಲೋಡಿ ಯವರು ನಿವೃತ್ತ ಜೀವನಕ್ಕೆ ಶುಭಹಾರೈಸಿದರು.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಪುತ್ಯ, ಪ್ರದೀಪ್ ಕುಮಾರ್ , ಮನೋಜ್ ಕುಮಾರ್ ಅಭಿನಂದಿಸಿ ಸನ್ಮಾನಿಸಿದರು. ಪಿಡಿಓ ಶಿವಲಿಂಗಯ್ಯ ರವರು ಕೂಡ ಸನ್ಮಾನಿಸಿ ಶುಭಕೋರಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ವಂದಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ನಿರೂಪಿಸಿದರು.ಸುಳ್ಯ ತಾಲೂಕು ಜಿಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.