ಸಂಪಾಜೆ ವಲಯ ಕಾಂಗ್ರೆಸ್ ಸಮಿತಿ ಹಾಗೂ ಸುಳ್ಯ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ಪದಗ್ರಹಣ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸಂಪಾಜೆ ವಲಯ ಕಾಂಗ್ರೆಸ್ ಸಮಿತಿ ಹಾಗೂ ಸುಳ್ಯ ತಾಲ್ಲೂಕು ಅಲ್ಪಸಂಖ್ಯಾತರ ಘಟಕ ಇದರ ಜಂಟಿ ಆಶ್ರಯದಲ್ಲಿ ಅರಂತೋಡು ತಾಲ್ಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಅಲ್ಪಸಂಖ್ಯಾತ ಘಟಕದ ಪದಗ್ರಹಣ ಕಾರ್ಯಕ್ರಮವು ಸಂಪಾಜೆ ಗೂನಡ್ಕದ ಸಜ್ಜನ ಸಭಾಭವನದಲ್ಲಿ ಮೇ ೨೦ ರಂದು ನಡೆಯಲಿರುವುದು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ. ಸಿ. ಜಯರಾಮ ಅಧ್ಯಕ್ಷತೆ ವಹಿಸಲಿರುವರು. ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಸ್ವಾಗತಿಸಲಿರುವರು. ಸುಳ್ಯ ತಾಲ್ಲೂಕು ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿ ಕೆ ಹಮೀದ್ ಗೂನಡ್ಕ ಪ್ರಾಸ್ತಾವಿಕ ಮಾತುಗಳನ್ನಾಡುವರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಉದ್ಘಾಟಿಸಲಿರುವರು. ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ. ಹರಿಪ್ರಸಾದ್ ಮುಖ್ಯ ಭಾಷಣ ಮಾಡಲಿರುವರು.
ಅರಂತೋಡು ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಪದಗ್ರಹಣ ಹಾಗೂ ಪುಸ್ತಕ ಹಸ್ತಾಂತರ ಅರಂತೋಡು ತಾಲ್ಲೂಕು ಪಂಚಾಯತ ಕ್ಷೇತ್ರ ಸಮಿತಿ ಅಧ್ಯಕ್ಷ ರಹೀಂ ಬೀಜದಕಟ್ಟೆಯವರಿಗೆ ದ ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಹಸ್ತಾಂತರಿಸುವರು.
ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ ಭಂಡಾರಿ, ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಅಮರ್ ನಾಥ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ವೀಕ್ಷಕ ಕೃಷ್ಣಪ್ಪ, ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗಳಾದ ಭರತ್ ಮುಂಡೋಡಿ, ಟಿ.ಎಂ. ಶಹೀದ್, ಎಂ. ವೆಂಕಪ್ಪ ಗೌಡ, ದ ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ಸುಳ್ಯ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಗೀತಾ ಕೋಲ್ಚಾರ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ್ ಉಪಸ್ಥಿತರಿರುವರು.
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿರುವರು ಎಂದು ಆಡಳಿತ ಮಂಡಳಿ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.