ಗುತ್ತಿಗಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 2022- 23 ನೇ ಸಾಲಿನ ಶಾಲ ಪ್ರಾರಂಭೋತ್ಸವ ಇಂದು ನಡೆಯಿತು. ಶಾಲಾ ಆವರಣವನ್ನು ತಳಿರು-ತೋರಣಗಳಿಂದ ಸಿಂಗರಿಸಲಾಗಿತ್ತು. ಪ್ರಾರಂಭದಲ್ಲಿ ಮಕ್ಕಳು ಪೋಷಕರು ಶಿಕ್ಷಕರು ಶಾಲಾ ಅಭಿವೃದ್ಧಿ ಸಮಿತಿಯವರು ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ನಂತರ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಭಾಕಾರ್ಯಕ್ರಮವನ್ನು ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಕೆ. ಬೆಳ್ಯಪ್ಪ ಗೌಡ ದೀಪ ಬೆಳಗಿಸಿ ಶುಭಹಾರೈಸಿದರು.
ಸಭಾಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ವಹಿಸಿದ್ದರು. ವೇದಿಕೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರೇವತಿ ಅಚ್ಚಳಿ ಹಾಗೂ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು. ಶಿಕ್ಷಣದ ಸಂಪನ್ಮೂಲ ವ್ಯಕ್ತಿ ಸಂತೋಷರವರು ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ವೆಂಕಟ್ ಮಾತನಾಡಿ, ಶಾಲಾ ಅಭಿವೃದ್ಧಿ ಬಗ್ಗೆ ಮತ್ತು ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಪೋಷಕರು ಹೆಚ್ಚು ಗಮನಹರಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ಗಣ್ಯರು ಉಪಸ್ಥಿತರಿದ್ದರು. ಶಿಕ್ಷಕ ಶಿಕ್ಷಕ ಶಶಿಧರ ಮಾವಿನಕಟ್ಟೆ ಸ್ವಾಗತಿಸಿದರು. ಮುಖ್ಯಶಿಕ್ಷಕಿ ಉಮಾವತಿ ವಂದಿಸಿದರು. (ವರದಿ : ಡಿ.ಹೆಚ್.)