ಜಯನಗರ ಸ ಉ ಹಿ ಪ್ರಾ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ, ಹಾಗೂ ಮಕ್ಕಳ ಜಾತಾ ಕಾರ್ಯಕ್ರಮ ಇಂದು ಜಯನಗರ ಶಾಲಾ ಅವರಣದಲ್ಲಿ ನಡೆಯಿತು.
ಕಾರ್ಯಕ್ರಮದ ನೇತೃತ್ವವನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ಕೆ ವಹಿಸಿದ್ದರು.
ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಲಾವಣ್ಯ ಜಯನಗರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಸಮಿತಿ ಉಪಾಧ್ಯಕ್ಷ ಮುದ್ದಪ್ಪ, ಹಾಗೂ ಸದಸ್ಯರು ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.