ದೊಡ್ಡತೋಟ : ಶಾಲಾ ಪ್ರಾರಂಭೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ದೊಡ್ಡತೋಟ ಸರಕಾರಿ ಹಿ. ಪ್ರಾ. ಶಾಲೆಯ ಪ್ರಾರಂಭೋತ್ಸವ ಅದ್ಧೂರಿಯಾಗಿ ನಡೆಯಿತು. ಶಾಲಾ ಮಕ್ಕಳು, ಎಸ್ ಡಿಎಂಸಿ ಪೋಷಕರು, ಶಾಲಾ ಶಿಕ್ಷಕರು ಒಟ್ಟುಗೂಡಿ ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿದ್ದರು.

ಗ್ರಾಮ ಪಂಚಾಯತ್ ಸದಸ್ಯ ಹೂವಪ್ಪ ಗೌಡರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಳೆಬಿಲ್ಲು ಮತ್ತು ಕಲಿಕಾ ಚೇತರಿಕೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಎಸ್ ಡಿಎಂಸಿ ಸದಸ್ಯೆ ಶ್ರೀಮತಿ ಗುಲಾಬಿ ಜನಾರ್ದನ ಕುಂಟಿಕಾನ ದಂಪತಿಗಳು ತಮ್ಮ ಪುತ್ರಿ ಧೃತಿ ಕೆ. ಅವರ ಜನ್ಮದಿನದ ಪ್ರಯುಕ್ತ ಶೈಕ್ಷಣಿಕ ವರ್ಷದ ಎಲ್ಲ ವಿದ್ಯಾರ್ಥಿಗಳಿಗೂ 37 ಸಾವಿರ ರೂ. ಮೌಲ್ಯದ ನೋಟ್ ಬುಕ್ ಗಳನ್ನು ಉಚಿತವಾಗಿ ವಿತರಿಸಿದರು. ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಲಲಿತಾ ಹೆಚ್. ಕೆ. ಮತ್ತು ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಶಿಲ್ಪಾ ರವರು ರಾಷ್ಟ್ರೀಯ ಡೆಂಗ್ಯೂ ದಿನದ ಅಂಗವಾಗಿ ಡೆಂಗ್ಯೂ ಜಾಗೃತಿ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಾನಕಿ, ಎಸ್ ಡಿಎಂಸಿ ಅಧ್ಯಕ್ಷ ಹೇಮಚಂದ್ರ ನಂದಗೋಕುಲ, ಶಾಲಾ ಮುಖ್ಯೋಪಾಧ್ಯಾಯ ಬಾಬು ಕೆ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಸ್ ಡಿಎಂಸಿ ಸದಸ್ಯರು, ಪೋಷಕರು, ಶಾಲಾ ಶಿಕ್ಷಕ ಶಿಕ್ಷಕಿಯರು, ಹಳೆವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಗಳು, ಮಕ್ಕಳು ಉಪಸ್ಥಿತರಿದ್ದರು. ಶಿಕ್ಷಕ ಪ್ರಕಾಶ್ ಕೆ. ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕರು ಸ್ವಾಗತಿಸಿದರು. ಶಿಕ್ಷಕ ತಿಮ್ಮಪ್ಪ ಶೆಟ್ಟಿ ವಂದಿಸಿದರು. ಎಲ್ಲರಿಗೂ ಸಿಹಿ ವಿತರಣೆ ಮಾಡಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.