ಸ ಕಿ ಪ್ರಾ ಶಾಲೆ ಪೈಂಬೆಚ್ಚಾಲು ಇಲ್ಲಿ ಶಾಲಾ ಪ್ರಾರಂಭೋತ್ಸವ ಇಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹೂ ಗುಚ್ಛ ನೀಡಿ ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಧರ್ಮಪಾಲ ಕೊಯಿಂಗಾಜೆ, ಗೀತಾ ಕೋಲ್ಚಾರು, ಕುಸುಮಾವತಿ ಬಿಲ್ಲರಮಜಲು, ಆರೋಗ್ಯ ಕಾರ್ಯಕರ್ತೆ ಮಧುಶ್ರೀ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ಕುಂಞಿ, ಶಾಲಾ ಮುಕ್ಯೋಪಾಧ್ಯಾಯಿನಿ ವಿಶಾಲಾಕ್ಷಿ, ಪ್ರತಿಮಾ ಟೀಚರ್, ಮತ್ತು ಎಸ್ ಡಿ ಎಂ ಸಿ ಸದಸ್ಯರು ಮತ್ತು ಪೋಷಕರು, ಅತಿಥಿ ಉಪನ್ಯಾಸಕಿ ಉಪಸ್ಥಿತರಿದ್ದರು.ನಂತರ ಧರ್ಮಪಾಲ ಕೊಯಿಂಗಾಜೆ ಯವರು ಮಕ್ಕಳಿಗೆ ಸಿಹಿ ತಿಂಡಿ ನೀಡಿದರು.ಬಿಸಿಊಟದ ಜೊತೆ ಪಾಯಸ ಊಟವನ್ನು ನೀಡಲಾಯಿತು.