ಗ್ರೀನ್ ವ್ಯೂ ಶಿಕ್ಷಣಸಂಸ್ಥೆಯಲ್ಲಿ ಬಹಳ ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವವನ್ನು ಇಂದು ಆಚರಿಸಲಾಯಿತು.
ಶಾಲಾ ಪ್ರಾರಂಭೊತ್ಸವದ ಸಭಾ ಕಾರ್ಯಕ್ರಮವನ್ನು ಗಾಂಧಿನಗರ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಕೆ ಎಂ ಮುಸ್ತಫಾ ಉದ್ಘಾಟಿಸಿದರು
ಅನ್ಸಾರಿಯ ಎಜುಕೇಶನ್ ಸೆಂಟರ್ ಪ್ರಧಾನ ಕಾರ್ಯದರ್ಶಿ ಲತೀಫ್ ಹರ್ಲಡ್ಕ,ಅನ್ಸಾರಿಯ ಎಜುಕೇಶನ್ ಆಡಳಿತ ಮಂಡಳಿ ನಿರ್ದೇಶಕರಾದ ಶಾಫಿ ಕುತ್ತಮೊಟ್ಟೆ,ನಗರ ಪಂಚಾಯತ್ ಸದಸ್ಯರಾದ ಉಮ್ಮರ್ ಕೆ ಎಸ್ ಮೊದಲಾದವರು
ಪೋಷಕರು,ಶಾಲಾ ಶಿಕ್ಷಕ-ಶಿಕ್ಷಕಿಯರು, ವಿದ್ಯಾರ್ಥಿಗಳು ನೂತನವಾಗಿ ಸೇರ್ಪಡೆಯಾದ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.
ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯ ಎಂ ಎಸ್ ಎಂ ಅಬ್ದುಲ್ ರಹೀಮ್ ಸ್ವಾಗತಿಸಿ ಶಿಕ್ಷಕ ಮಂಜುನಾಥ್ ವಂದಿಸಿ ಶಿಕ್ಷಕ ರಂಜಿತ್ ಕಾರ್ಯಕ್ರಮ ನಿರೂಪಿಸಿದರು.