ಸುಳ್ಯದ ಅಂಬೆಟಡ್ಕ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಸುಳ್ಯ ಪ್ರೆಸ್ ಕ್ಲಬ್ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಕಲ್ಲುಗುಂಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 25,000 ರೂಪಾಯಿಯ ಚೆಕ್ ನೀಡಲಾಗಿದೆ.
ಮೇ. 16 ರಂದು ಸಂಘದ ಸಭಾಂಗಣದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆಯವರು ಪ್ರೆಸ್ ಕ್ಲಬ್ ನಿರ್ದೇಶಕ ಕೃಷ್ಣ ಬೆಟ್ಟರಿಗೆ ಚೆಕ್ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ, ಕಾರ್ಯನಿರ್ವಹಣಾಧಿಕಾರಿ ವೀರೇಂದ್ರಕುಮಾರ್, ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.