Breaking News

ನಡುಗಲ್ಲು : ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ನಾಲ್ಕೂರು ಗ್ರಾಮದ ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ.16 ರಂದು ಶಾಲಾ ಪ್ರಾರಂಭೋತ್ಸವ(ಕಲಿಕಾ ಚೇತರಿಕಾ ವರ್ಷ 2022-23) ನಡೆಯಿತು.
ಪ್ರಾರಂಭೋತ್ಸವದ ಅಂಗವಾಗಿ ಮೆರವಣಿಗೆ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯಕುಮಾರ್ ಚಾರ್ಮತ ಬ್ಯಾಂಡ್ ಬಾರಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯ ನಂತರ ಶಾಲೆಯಲ್ಲಿ ಸಮಾರಂಭ ನಡೆಯಿತು. ವಿಜಯಕುಮಾರ್ ಚಾರ್ಮತ ಅವರು ದೀಪ ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಉಮೇಶ್ವರಿ ನೆಲ್ಲಿಪುಣಿ, ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪಾರೆಪ್ಪಾಡಿ, ಸಹ ಶಿಕ್ಷಕರುಗಳಾದ ಕುಶಾಲಪ್ಪ ತುಂಬತ್ತಾಜೆ, ಸುಧಾರಾಣಿ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸರ್ವ ಸದಸ್ಯರುಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹಾಗೂ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆಟ ಆಡಿಸುವ ಮೂಲಕ 14 ದಿನಗಳ ಕಾಲ ನಡೆಯುವಂತಹ ಮಳೆಬಿಲ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.