Breaking News

ಸುಳ್ಯ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ದಕ್ಷಿಣ ಕನ್ನಡ ಜಿಲ್ಲಾ ಅಧಿಕಾರಿ ರವರ ಆದೇಶದ ಮೇರೆಗೆ ಮೇ. 16ರಂದು ಸರಕಾರಿ ಇಲಾಖೆಗಳ ಕಟ್ಟಡ ಪರಿಸರ ಹಾಗೂ ಕಚೇರಿಗಳ ಆವರಣ ಪರಿಸರಗಳ ಸ್ವಚ್ಛತೆ ಅಂಗವಾಗಿ ಸುಳ್ಯ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಆವರಣ ಮತ್ತು ಪರಿಸರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ವಿವೇಕಾನಂದ ವೃತ್ತದ ಬಳಿ, ಹಾಗೂ ಬಸ್ಸು ತಂಗುದಾಣ ಪರಿಸರವನ್ನು ಸ್ವಚ್ಛ ಮಾಡಲಾಯಿತು.
ಸುಳ್ಯ ತಾಲೂಕು ಆರೋಗ್ಯಾಧಿಕಾರಿ ನಂದಕುಮಾರ್ ಈ ಸಂದರ್ಭದಲ್ಲಿ ಮಾತನಾಡಿ ಮಳೆಗಾಲ ಆರಂಭವಾಗುವ ಮುನ್ನ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಹರಡುವ ಸಾಧ್ಯತೆಯಿದ್ದು, ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ನಾನಾ ಭಾಗಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಂಡುಬರುತ್ತಿದ್ದು ಸುಳ್ಯದ ಪ್ರತಿಯೊಬ್ಬ ನಾಗರಿಕರು ತಮ್ಮ ತಮ್ಮ ಮನೆಯ ಪರಿಸರವನ್ನು ಸ್ವಚ್ಛ ಪಡಿಸಿಕೊಳ್ಳುವಂತೆ ಹಾಗೂ ನೀರು ಶೇಖರಣೆಗೊಂಡು ಸೊಳ್ಳೆಗಳು ಉತ್ಪತ್ತಿಯಾಗಿ ನಾನಾ ರೀತಿಯ ಕಾಯಿಲೆಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಆರೋಗ್ಯ ಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಸ್ಥಳೀಯ ಆಟೋ ಚಾಲಕರು, ಆರೋಗ್ಯ ಸಹಾಯಕಿಯರು, ಭಾಗವಹಿಸಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.