ಕೋಲ್ಚಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸಭಾಭವನಕ್ಕೆ ಅದೇ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಜಲಜಾಕ್ಷಿ ಯವರು ರೂ .50,555 ಸಹಾಯಧನವನ್ನು ನೀಡಿದರು.. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಸುದರ್ಶನ ಪಾತಿಕಲ್ಲು, ಪಂ. ಉಪಾಧ್ಯಕ್ಷ ದಿನೇಶ್ ಕಣಕ್ಕೂರು, ಸೊಸೈಟಿ ಉಪಾಧ್ಯಕ್ಷ ಕರುಣಾಕರ ಹಾಸ್ಪಾರೆ, ಎಸ್. ಡಿ.ಎಂ.ಸಿ. ಉಪಾಧ್ಯಕ್ಷೆ ಹೇಮಾವತಿ ಕೊಯಿಂಗಾಜೆ ಹಾಗೂ ಎಸ್ಡಿಎಮ್ಸಿ ಸದಸ್ಯರು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.