ಕೇಂದ್ರ ಸರಕಾರದ ಬೆಳೆ ವಿಮೆ ಮತ್ತು ಕಿಸಾನ್ ಯೋಜನೆ ಫಲಾನುಭವಿಗಳ ಸಮಾವೇಶ
ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಸುಳ್ಯ ಮಂಡಲ ಇದರ ಆಶ್ರಯದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಹಯೋಗದೊಂದಿಗೆ ಕೇಂದ್ರ ಸರಕಾರದ ಬೆಲೆ ವಿಮೆ ಮತ್ತು ಕಿಸಾನ್ ಸಮ್ಮಾನ್ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಕೃಷಿ ವಿಚಾರ ಸಂಕಿರಣ ಮೇ.17 ರಂದು ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಿತು.
ಸಚಿವ ಎಸ್.ಅಂಗಾರ ಸಮಾವೇಶವನ್ನು ಉದ್ಘಾಟಿಸಿದರು.
ರೈತ ಮೋರ್ಚಾ ಸುಳ್ಯ ಮಂಡಲ ಅಧ್ಯಕ್ಷ ರಮೇಶ್ ಕಲ್ಪುರೆ ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪುತ್ತೂರಿನ ಡಾ. ಶ್ರೀಶ ಕುಮಾರ್ ಭಾಗವಹಿಸಿದ್ದರು.
ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಬಿಜೆಪಿ ಸುಳ್ಯ ಮಂಡಲಾಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಗಳಾದ ರಾಕೇಶ್ ರೈ ಕೆಡೆಂಜಿ, ಸುಭೋದ್ ಶೆಟ್ಟಿ ಮೇನಾಲ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ ಅತಿಥಿಗಳಾಗಿದ್ದರು.
ಆಲೆಟ್ಟಿ ಸಹಕಾರ ಸಂಘದ ಅಧ್ಯಕ್ಷ ಶ್ರೀಪತಿ ಭಟ್, ಸುಳ್ಯ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ, ಉಬರಡ್ಕ ಸಹಕಾರಿ ಸಂಘ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ, ಕನಕಮಜಲು ಸಹಕಾರಿ ಸಂಘದ ಅಧ್ಯಕ್ಷ ಡಾ.ಗೋಪಾಲಕೃಷ್ಣ ಭಟ್, ಮರ್ಕಂಜ ಸಹಕಾರಿ ಸಂಘದ ಅಧ್ಯಕ್ಷ ಮಹಾಬಲ ಗೌಡ ಕಟ್ಟಕೋಡಿ, ಮಂಡೆಕೋಲು ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಪೇರಾಲುಗುತ್ತು ವೇದಿಕೆಯಲ್ಲಿ ಇದ್ದರು.
ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಳಾದ ಜಯರಾಮ ಮುಂಡಳಿಮೂಲೆ ಹಾಗೂ ಗಿರಿಧರ ಕೆ.ಪಿ. ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.