ಕದಿಕಡ್ಕ : ಶಾಲಾ ಪ್ರಾರಂಭೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕದಿಕಡ್ಕ ಸ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು ಹೊಸದಾಗಿ ಶಾಲೆಗೆ ಸೇರ್ಪಡೆಯಾದ ಮಕ್ಕಳಿಗೆ ಹೂಗುಚ್ಚ ನೀಡಿ ಸ್ವಾಗತಿಸಲಾಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಎಸ್. ವಹಿಸಿದ್ದರು.
ನಿವೃತ್ತ ಶಿಕ್ಷಕಿ ಶ್ರೀಮತಿ ಅಮ್ಮಣ್ಣಿ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಬು ಕೆ.ಎಂ, ಸದಸ್ಯೆ ಶ್ರೀಮತಿ ತಿರುಮಲೇಶ್ವರಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ತಿಮ್ಮಯ್ಯ ಎಸ್. ಉಪಸ್ಥಿತರಿದ್ದರು. ಸಭೆಯಲ್ಲಿ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಾರಿಜ ಬಿ.ಪ್ರಾಸ್ತಾವಿಕವಾಗಿ ಮಾತನಾಡಿ ಕಲಿಕಾ ಚೇತರಿಕೆ, ಮಳೆ ಬಿಲ್ಲು ಮತ್ತು ಇತರ ವಿಷಯಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಸಹ ಶಿಕ್ಷಕಿ ಶ್ರೀಮತಿ ದೇವಕಿ ಎಂ. ಸ್ವಾಗತಿಸಿ, ಅತಿಥಿ ಶಿಕ್ಷಕಿ ಚೈತ್ರ ಎ ವಂದಿಸಿದರು ಸಹ ಶಿಕ್ಷಕರಾದ ಶ್ರೀಮತಿ  ರತಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಮಧ್ಯಾಹ್ನದ ಬಿಸಿಯೂಟಕ್ಕೆ ಪಾಯಸದ ವ್ಯವಸ್ಥೆಯನ್ನು ಜಾಲ್ಸೂರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ತಿರುಮಲೇಶ್ವರಿ ಅವರು ಮಾಡಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.