ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಪೂರ್ವಭಾವಿ ಸಭೆ
ಅಮೃತ ಭಾರತಿಗೆ ಕನ್ನಡದ ಆರತಿ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವವು ಮೇ.28 ರಂದು ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ನಡೆಯಲಿದ್ದು ಈ ಬಗ್ಗೆ ಪೂರ್ವಭಾವಿ ಸಭೆಯು ಮೇ.19 ರಂದು ಬೆಳ್ಳಾರೆ ಕೆ.ಪಿ.ಎಸ್.ಸಭಾಂಗಣದಲ್ಲಿ ನಡೆಯಿತು.
ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಪ್ರಸ್ತಾವಿಕವಾಗಿ ಮಾತನಾಡಿ ಅಮರ ಸುಳ್ಯದ ಬಗ್ಗೆ ಕಳೆದ ವರ್ಷ ಬಂಗ್ಲೆಗುಡ್ಡೆಯಲ್ಲಿ ನಡೆದ ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿ ಈ ವರ್ಷವೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಎಲ್ಲಾ ಸಂಘ ಸಂಸ್ಥೆಗಳನ್ನು ,ಇಲಾಖೆಗಳನ್ನು ಸೇರಿಸಿಕೊಂಡು ಅದ್ದೂರಿಯಾಗಿ ಕಾರ್ಯಕ್ರಮ ಮಾಡುವ ಬಗ್ಗೆ ಮಾಹಿತಿ ನೀಡಿದರು.
ತಹಶೀಲ್ದಾರ್ ಅನಿತಾ ಲಕ್ಷ್ಮಿಯವರು ಮಾತನಾಡಿ ಒಂದು ದಿನ ಬೆಳಿಗ್ಗೆಯಿಂದ ಸಂಜೆವರೆಗೆ ಕಾರ್ಯಕ್ರಮ ನಡೆಯಬೇಕು.
ಬೆಳಿಗ್ಗೆ ಬೆಳ್ಳಾರೆ ಪೇಟೆಯಲ್ಲಿ ಮೆರವಣಿಗೆ ನಡೆದು ಬಳಿಕ ಬಂಗ್ಲೆಗುಡ್ಡೆಯಲ್ಲಿ ಅಮರಸುಳ್ಯದ ಇತಿಹಾಸವಿರುವ ಶಿಲಾಫಲಕವನ್ನು ಅನಾವರಣಗೊಳಿಸಲಾಗುವುದು.ನಂತರ ಸಭಾಕಾರ್ಯಕ್ರಮ ನಡೆಯುತ್ತದೆ.
ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಗಬೇಕು ಎಂದು ಹೇಳಿದರು.ತಾಲೂಕು
ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಂದ್ರಶೇಖರ ಪೇರಾಲು ಮಾತನಾಡಿ ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸುವ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಬೆಳ್ಳಾರೆ ಠಾಣೆಯ ಕ್ರೈಂ ಎಸ್.ಐ.ಆನಂದ,ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ದಯಾನಂದ ಕೇರ್ಪಳ ಉಪಸ್ಥಿತರಿದ್ದು ಮಾತನಾಡಿದರು.
ಸಭೆಯಲ್ಲಿ ವಿವಿಧ , ಸಂಸ್ಥೆಗಳ ಪದಾಧಿಕಾರಿಗಳು,ಇಲಾಖಾಧಿಕಾರಿಗಳು,ಶಾಲಾ,ಕಾಲೇಜಿನ ಉಪನ್ಯಾಸಕರು,ಶಿಕ್ಷಕರು,ಗ್ರಾಮ ಪಂಚಾಯತ್ ಸದಸ್ಯರು,ಊರವರು ಉಪಸ್ಥಿತರಿದ್ದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.