Breaking News

ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಪುಸ್ತಕಗಳ ವಿತರಣಾ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಸುಂದರ ಭಾರತ ಟ್ರಸ್ಟ್. ಜೆ. ಪಿ. ನಗರ ಬೆಂಗಳೂರು ವತಿಯಿಂದ ಕೊಡಮಾಡಿದ ಪುಸ್ತಕಗಳ ವಿತರಣಾ ಕಾರ್ಯಕ್ರಮ ಮೇ.19ರಂದು ನಡೆಯಿತು. ಈ ಸಂದರ್ಭದಲ್ಲಿ ಸುಮಾರು 850 ನೋಟ್ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಹಾಗೂ 80 ಗ್ರಂಥಾಲಯದ ಪುಸ್ತಕಗಳನ್ನು ಶಾಲೆಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಯ ಕಾರ್ಯಾಧ್ಯಕ್ಷ ಜಯಂತ ಹರ್ಲಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್ ಡಿ ಎಂ ಸಿ ಸದಸ್ಯರಾದ ಕೃಷ್ಣಪ್ಪ ಅಂಗಕೆ ಅಡಿಕೆಹಿತ್ಲು , ಲೀಲಾಧರ ಗುಡ್ಡೆ ಬಟ್ಟೆಕಜೆ , ಧನಂಜಯ ಬಾಳೆತೋಟ ಉಪಸ್ಥಿತರಿದ್ದರು. ಶಿಕ್ಷಕ ವಸಂತ ನಾಯಕ್ ಸ್ವಾಗತಿಸಿ, ಮುಖ್ಯ ಶಿಕ್ಷಕಿ ತಿರುಮಲೇಶ್ವರಿ ವಂದಿಸಿದರು. ಮುರಳೀಧರ ಪಿ ಜೆ. ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.