ನಿಂತಿಕಲ್ಲು ಕೆ ಎಸ್ ಗೌಡ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಪ್ರಾರಂಭೋತ್ಸವವು ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಮಿತಿಯ ಅಧ್ಯಕ್ಷ ನಾರಾಯಣ ಶಿರಾಜೆ, ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಆಡಳಿತಾಧಿಕಾರಿ ಕುಮಾರಸ್ವಾಮಿ ಕೆ.ಎಎಸ್., ಮುಖ್ಯ ಶಿಕ್ಷಕ ಉಮೇಶ್ ಗೌಡ ಹೆಚ್., ಎಲ್ಲಾ ಶಿಕ್ಷಕರು ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳ ಹೆತ್ತವರು, ಪೋಷಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳನ್ನು ಆರತಿ ಬೆಳಗುವ ಮೂಲಕ 2022- 23 ನೇ ಶೈಕ್ಷಣಿಕ ವರ್ಷಕ್ಕೆ ಶಾಲೆಗೆ ಸ್ವಾಗತಿಸಲಾಯಿತು.