ಮುರುಳ್ಯ ಗ್ರಾಮದ ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಮೇ.18 ಹಾಗೂ 19ರಂದು ಪ್ರತಿಷ್ಟಾ ವಾರ್ಷಿಕೋತ್ಸವ ನಡೆಯಿತು. ಮೇ.14ರಂದು ಶ್ರೀ ನರಸಿಂಹ ಜಯಂತಿ ಅಂಗವಾಗಿ ಮಧ್ಯಾಹ್ನ ವಿಶೇಷ ಮತ್ತು ಅದೇ ದಿನ ರಾತ್ರಿ ರಂಗಪೂಜೆ ನಡೆಯಿತು. ಮೇ.18ರಂದು ಸಂಜೆ ಭಜನಾ ಕಾರ್ಯಕ್ರಮ, ಸಾಮೂಹಿಕ ಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ ನಡೆಯಿತು.
ಮೇ.19ರಂದು ಬೆಳಿಗ್ಗೆ ತಂತ್ರಿಗಳ ಆಗಮನ, ಸಾಮೂಹಿಕ ಪ್ರಾರ್ಥನೆ, ಗಣಪತಿ ಹವನ, ಬಿಂಬಶುದ್ಧಿ, ಕಲಶಪೂಜೆ, ಕಲಶಾಭಿಷೇಕ, ಮಹಾಪೂಜೆ ಬಳಿಕ ಶ್ರೀ ದೇವರ ಬಲಿ ಹೊರಟು, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಂಗಳಾರತಿ, ಮಂತ್ರಾಕ್ಷತೆ, ಸಂಪ್ರೋಕ್ಷಣೆ, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವರಕಾನ ಲಕ್ಷ್ಮಿ ನರಸಿಂಹ ಸೇವಾ ಟ್ರಸ್ಟ್ ನ ಅಧ್ಯಕ್ಷ ರು ಮತ್ತು ಸದಸ್ಯರು,ಉತ್ಸವ ಸಮಿತಿ, ಸೇವಾ ಸಮಿತಿ, ಭಜನಾ ಮಂಡಳಿಯ ಅಧ್ಯಕ್ಷ ರು ಮತ್ತು ಸದಸ್ಯರು ಹಾಗೂ ಊರ ಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು.
ವರದಿ : ಸಂಕಪ್ಪ ಸಾಲ್ಯಾನ್ ಅಲೆಕ್ಕಾಡಿ