ಸುಳ್ಯದಲ್ಲಿ ಯಶಸ್ವಿಯಾಗಿ ಜರುಗಿದ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಮೇ.25ರಂದು ಯಶಸ್ಸಿಗೆ ಶ್ರಮಿಸಿದವರಿಗೆ ಅಭಿನಂದನಾ ಸಮಾರಂಭ

 

೨೦೨೨ರ ಮೇ.೪ ರಿಂದ ಮೇ.೮ರವರೆಗೆ ಸುಳ್ಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ನಡೆದಿದ್ದು, ವಾಲಿಬಾಲ್ ಪಂದ್ಯಾಟದ ಯಶಸ್ಸಿಗಾಗಿ ಶ್ರಮಿಸಿದ ಸಂಘಟನಾ ಸಮಿತಿಯ ಸದಸ್ಯರುಗಳಿಗೆ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಅಭಿನಂದನಾ ಸಮಾರಂಭ ಮೇ.೨೫ರಂದು ಸಂಜೆ 5 ಗಂಟೆಗೆ ಸುಳ್ಯದ ಉಡುಪಿ ಗಾರ್ಡನ್ ರೆಸ್ಟೋರೆಂಟ್ ಸಭಾಭವನ ಪರಿವಾರಕಾನದಲ್ಲಿ ಜರುಗಲಿದೆ.
ಸಭೆಯ ಅಧ್ಯಕ್ಷತೆಯನ್ನು ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿ ಸಂಘಟನಾ ಸಮಿತಿ ಅಧ್ಯಕ್ಷ ಎನ್.ಎ. ರಾಮಚಂದ್ರ ವಹಿಸಲಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಪೂರ್ವಾಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಬಿ.ಕೆ. ಮಾಧವ, ದ.ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಖಜಾಂಚಿ ಇಬ್ರಾಹಿಂ ಗೂನಡ್ಕ, ಕಡಬ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಲಕ್ಷ್ಮೀನಾರಾಯಣ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸುಳ್ಯದಲ್ಲಿ ನಡೆದ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿ ಸಂಘಟನಾ ಸಮಿತಿ ಸಂಘಟನಾ ಕಾರ್ಯದರ್ಶಿ ಎನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.