ಚೊಕ್ಕಾಡಿ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರದಲ್ಲಿ ಪೋಷಕರ ಸಭೆ ಮೇ. 22ರಂದು ಸಂಸ್ಥೆಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕೋಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಗುಣಶೇಖರ್ ಮುಚ್ಚಿಲ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಸಾಯಿಪ್ರಸಾದ್ ಎಸ್ ಮತ್ತು ಶಿಕ್ಷಕ ವರ್ಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕೋಟೆ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳನ್ನು, ಪೋಷಕರು ಸಂಸ್ಥೆಯ ಸಂಬಂಧದ ಬಗ್ಗೆ ಮಾಹಿತಿ ನೀಡಿದರು.